Bailahongala

ಬೆಳಗಾವಿ ಜಿಲ್ಲೆಯ ನಾಲ್ಕು ತಾಲ್ಲೂಕಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Share

ಬೆಳಗಾವಿ ಮತ್ತು ಖಾನಾಪುರದಲ್ಲಿ ಧಾರಾಕಾರವಾಗಿ ಮಳೆ ಆಗುತ್ತಿದೆ ಈ ಹಿನ್ನೆಲೆಯಲ್ಲಿ ಬುಧವಾರ ಜುಲೈ 24ರಂದು ಬೆಳಗಾವಿ ತಾಲೂಕಿನ ಅಂಗನವಾಡಿಯಿಂದ ಪಿಯುಸಿಯವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪಶ್ಚಿಮ ಘಟಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

error: Content is protected !!