ಗೋಕಾಕ್ ಜಲಪಾತ ದಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದ್ದು, 180 ಅಡಿ ಮೇಲಿಂದ ನೀರು ದುಮ್ಮಿಕ್ಕುವ ಸ್ಥಳಗಳಲ್ಲಿ ಸಾವಿನ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ .ಸ್ವಲ್ಪ ಆಯ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ .

ಭಾರತದ ನಯಾಗರ ಜಲಪಾತ ಅಂತಾನೇ ಹೆಸರುವಾಸಿಯಾಗಿರುವ ಗೋಕಾಕ ಜಲಪಾತದಲ್ಲೂ ನಯನಮನೋಹರ ದೃಶ್ಯ ಸೃಷ್ಟಿಯಾಗಿದೆ , ಗೋಕಾಕ್ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಳವಾಗಿದೆ ,ಪ್ರವಾಸಿಗರು ಅಪಾಯದ ಅರಿವಿಲ್ಲದೆ ಬಂಡೆಗಲ್ಲುಗಳ ಮೇಲೆ ಕುಳಿತು ಸಾರ್ವಜನಿಕರು ಊಟ ಮಾಡುತ್ತಿದ್ದಾರೆ. ಇನ್ನು ಇಷ್ಟೇಲ್ಲಾ ಅಗುತ್ತಿದ್ದರೂ ಜಲಪಾತಕ್ಕೆ ಭದ್ರತೆ ಒದಗಿಸದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಇನ್ನು ಯುವಕರ, ಮಹಿಳೆಯರು ಮಕ್ಕಳು ಸೇರಿದಂತೆ ಜಲಪಾತದ ತುದಿಯಲ್ಲಿ ಹುಚ್ಚಾಟ ಮಾಡುತ್ತಿದ್ದಾರೆ , ಕೆಲ ಪ್ರವಾಸಿಗರು ಬಂಡೆಯ ಮೇಲೇರಿ ಜಲಪಾತದ ತುತ್ತತುದಿಗೆ ಹೋಗುತ್ತಿದ್ದಾರೆ ,
ಪ್ರಾಣದ ಹಂಗು ತೊರೆದು ಫೋಟೋಗೆ ಪೋಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಗೋಕಾಕ ಜಲಪಾತ ತುದಿಗೆ ಹೋಗಿ ಕಾಲು ಜಾರಿ ಬಿದ್ದು ಕೆಲ ಪ್ರವಾಸಿಗರು ಮೃತಪಟ್ಟ ಪ್ರಕರಣಗಳು ನಡೆದಿದ್ದವು.