Belagavi

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ : ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ನಿರ್ಬಂಧ

Share

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ದಟ್ಟ ಕಾಡಂಚಿನಲ್ಲಿರುವ ಜಲಪಾತಗಳ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮಹಾರಾಷ್ಟ್ರದ ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಖಾನಾಪುರ ತಾಲೂಕಿನ ಕಾಡಂಚಿನಲ್ಲಿರುವ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಬ್ರೇಕ್ ಹಾಕಿದೆ.
ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್ ಹೀಗೆ 7 ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಫಾಲ್ಸ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದಾರೆ. ಫಾಲ್ಸ್ ಮುಖ್ಯ ರಸ್ತೆಗೆ ಮೂವರು ಫಾರೆಸ್ಟ್ ಗಾರ್ಡ್ಗಳು ಕಾವಲು ಕಾಯುತ್ತಿದ್ದಾರೆ. ವೀಕೆಂಡ್ನಲ್ಲಿ ಫಾಲ್ಸ್ ನೋಡಲು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ

Tags:

error: Content is protected !!