ಅಥಣಿ : ರಾಜ್ಯದಲ್ಲಿ ವಾಲ್ಮೀಕಿ ನಿಗಮ ಹಣ ವರ್ಗಾವಣೆ ಹಗರಣವನ್ನು ಎಸ್ ಐ ಟಿ ಬದಲು ಸಿಬಿಐಗೆ ಒಪ್ಪಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಒತ್ತಾಯಿಸಿದ್ದಾರೆ .
ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರ ಹಣ ದುರ್ಬಳಕೆ ಮಾಡಿಕೊಂಡಿದೆ. ಎಸ್ ಟಿ ಮೀಸಲಾತಿಯ ಸಾವಿರಾರು ಕೋಟಿ ರೂ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿದ್ದೂ ದಲಿತರನ್ನ ಹತ್ತಿಕ್ಕುವ ಕೆಲಸಕ್ಕೆ ಕೈಗಣ್ಣಡಿಯಾಗಿದೆ.
ಅಷ್ಟೇ ಅಲ್ಲದೆ ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಅವ್ಯವಹಾರ ಎಸ್ ಐ ಟಿ ಯಿಂದ ತನಿಖೆ ಮಾಡಲು ಸಾಧ್ಯವಿಲ್ಲ ರಾಜ್ಯ ಸರ್ಕಾರ ಸಿಬಿಐ ಗೆ ವಹಿಸಬೇಕೆಂದು ಆಗ್ರಹಿಸಿದರು .