hubbali

ರಾಜಕಾರಣದಲ್ಲಿ ಸ್ವಾಮೀಜಿಗಳನ್ನು ಬಳಸಿಕೊಳ್ಳುವುದು ಸರಿಯಲ್ಲ – ಶಾಸಕ ಮಹೇಶ್ ಟೆಂಗಿನಕಾಯಿ

Share

ರಾಜ್ಯ ಸರ್ಕಾರದಲ್ಲಿ ಶಾಸಕರು ಏಕೆ ಬೇಕು. ಎಲ್ಲ 33 ಜನರನ್ನ ಉಪ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಡೆದಿರುವ, ಬೆಳವಣಿಗೆ ನೋಡಿದ್ರೆ, ಸರ್ಕಾರ ಯಾವುದೇ ಸ್ಥಿತಿಯಲ್ಲಿ ಸರಿಯಿಲ್ಲ ಎಂದು ಗೊತ್ತಾಗುತ್ತಿದೆ. ಡಿ.ಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ಅವರ ಬೆಂಬಲಿತ ಚೆನ್ನಗಿರಿಯ ಶಾಸಕ ಬೇಡಕೆ. ಇನ್ನು 15 ಜನರನ್ನು ಉಪಮುಖ್ಯ ಮಂತ್ರಿ ಮಾಡಿ ಎಂದು ಹೇಳಿದ್ದಾರೆ.

ಇನ್ನೊಂದು ಕಡೆ ರಾಜಣ್ಣ ನಾನೇ ಮುಖ್ಯಮಂತ್ರಿ ಆಗುತ್ತೇನೆ ಅಂತಾ ಹೇಳ್ತಿದ್ದಾರೆ , ಅತ್ತ ಡಿಕೆಶಿಯವರನ್ನ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಇಳಿಸಿ ಅಂತಾ ಹೇಳಿದ್ದಾರೆ. ಇದನೆಲ್ಲ ನೋಡಿದ್ರೆ ಸರಕಾರ ಯಾವ ರೀತಿಯ ವಿಡಂಬನೆಗೆ ಹೋಗ್ತಿದೆ ಅಂತ ತಿಳಿಯುತ್ತದೆ. ಅಲ್ಲದೇ ಕಾಂಗ್ರೆಸ್ ‘ನ ಒಳಗೆ ಆಂತರಿಕ ಸರಿ ಇಲ್ಲ ಎಂಬುದು ಗೊತ್ತಾಗುತ್ತದೆ. ಈ ಬೆಳವಣಿಗೆ ಪಕ್ಷಕ್ಕೆ ದೊಡ್ಡ ಪೆಟ್ಟು ಕೊಡುತ್ತದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ವಾಗ್ದಾಳಿ ನಡೆಸಿದ್ದಾರೆ .

ಸ್ವಾಮೀಜಿಗಳಿಗೆ ರಾಜಕಾರಣದ ಬಗ್ಗೆ ಮಾತನಾಡಿ ಎಂದು ಕೆಲವು ರಾಜಕಾರಣಿಗಳು ಹೇಳುವುದರಿಂದ ಸ್ವಾಮೀಜಿಗಳು ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ, ರಾಜಕಾರಣಕ್ಕೆ ಸ್ವಾಮೀಜಿಗಳನ್ನು ಬಳಸಿಕೊಳ್ಳುವುದು ಸರಿಯಲ್ಲ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಪಕ್ಷ ಆಗಿರಲಿ ಸ್ವಾಮೀಜಿಗಳನ್ನು ರಾಜಕಾರಣಕ್ಕೆ ಬಳಸಿಕೊಳ್ಳಬಾರದು ಎಂದು ಶಾಸಕ ಮಹೇಶ ತೆಂಗಿನಕಾಯಿ ಹೇಳಿದರು.

Tags:

error: Content is protected !!