khanapur

ಖಾನಾಪೂರ ತಾಲೂಕಿನ ಅತಿವೃಷ್ಠಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Share

ಅತಿವೃಷ್ಠಿಗೊಳಗಾದ ಖಾನಾಪೂರ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಖಾನಾಪೂರ ತಾಲೂಕಿನ ವಿವಿಧ ಪ್ರದೇಶಗಳು ಅತಿವೃಷ್ಠಿಗೆ ಒಳಗಾಗಿವೆ. ಇಲ್ಲಿನ ಅನೇಕ ನದಿ-ನಾಲೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಅನೇಕ ಸೇತುವೆಗಳು, ರಸ್ತೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಇಂದು ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸದ್ಯ ಪರಿಸ್ಥಿತಿಯನ್ನು ಅವಲೋಕಿಸಿದರು. ಅತಿವೃಷ್ಠಿಯಿಂದ ಕುಸಿದ ಮನೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಲಪ್ರಭಾ ನದಿಗೆ ನಿರ್ಮಿಸಿದ ಸೇತುವೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಶಾಶ್ವತ ಪರಿಹಾರವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.

ನಂತರ ಖಾನಾಪೂರ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಿಶ್ರಾಂತಿ ಗೃಹದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಿಸಿದ ಅವರು ಜಿಲ್ಲಾಡಳಿತಕ್ಕೆ ಮತ್ತು ಸ್ಥಳೀಯ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನರಿಗೆ ಯಾವುದೇ ತೊಂದರೆಗಳು ಆಗದಂತೆ ನೋಡಿಕೊಳ್ಳಲು ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಖಾನಾಪೂರ ಶಾಸಕರಾದ ವಿಠ್ಠಲ ಹಲಗೇಕರ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸೇರಿದಂತೆ ಇನ್ನಿತರರು ಭಾಗಿಯಾಗಿದ್ಧರು.

Tags:

error: Content is protected !!