ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಶಿಗ್ಗಾವಿ ಬಳಿ ನಡೆದ ಕಾರು ಅಪಘಾತದಲ್ಲಿ ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ಮೃತರ ಕುಟುಂಬದ ಮನೆಗಳಿಗೆ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.

ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದ ಹತ್ತಿರ ಶನಿವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಬೇವಿನ ಮರಕ್ಕೆ ಡಿಕ್ಕಿ ಹೊಡೆದಿತ್ತು. ಸ್ಥಳದಲ್ಲಿಯೇ 23 ವರ್ಷದ ನೀಲಪ್ಪ ಮೂಲಿಮನಿ ಸಾವನ್ನಪ್ಪಿದ್ದರು. ಸುದೀಪ್ ಕೋಟಿ ಶಿಗ್ಗಾಂವ್ ಎಂಬವರು ತಾಲೂಕಾಸ್ಪತ್ರೆಯಲ್ಲಿ ಮೃತರಾದರೆ, ಬಳಿಕ ಚಿಕಿತ್ಸೆಗೆ ಸ್ಪಂದಿಸದೆ, ಶಿವನಗೌಡ ಯಲ್ಲನಗೌಡ್ರ ಹಾಗೂ ಕಲ್ಮೇಶ ಮಾನೋಜಿ ಎಂಬವರು ಕೊನೆಯುಸಿರೆಳೆದಿದ್ದರು.
ಹಾವೇರಿ ಗದಗ ಸಂಸದ ಬಸವರಾಜ ಬೊಮ್ಮಾಯಿ ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ಮೃತರ ಕುಟುಂಬದ ಮನೆಗಳಿಗೆ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ಈ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ವೈಯಕ್ತಿಕವಾಗಿ ಸಹಾಯ ಮಾಡಿ, ಶೀಘ್ರವಾಗಿ ಸರ್ಕಾರದಿಂದ ಹೆಚ್ಚಿನ ಪರಿಹಾರ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
