Dharwad

ಧಾರವಾಡದಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಬಹುಜನ ಸಮಾಜ ಪಕ್ಷದಿಂದ ಪ್ರತಿಭಟನೆ

Share

ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಹುಜನ ಸಮಾಜ ಪಕ್ಷದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಧಾರವಾಡದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷದ ಸದಸ್ಯರು ಪ್ರತಿಭಟನೆ ಆಕ್ರೋಶ ವ್ಯಕ್ತಪಡಿಸಿದರು , ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಹಣ ಲೂಟಿ ಮಾಡಿ ಭ್ರಷ್ಟಾಚಾರ ನಡೆಸಿರುವ ಕುರಿತು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಹುಜನ ಸಮಾಜ ಪಕ್ಷದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು .

Tags:

error: Content is protected !!