ಮಹಾರಾಷ್ಟ್ರದ ಗಡಿಯಲ್ಲಿನ ಸರ್ಕಾರಿ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ ಮಾಡಿರುವುದನ್ನು ಖಂಡಿಸಿ ಗಡಿ ಕನ್ನಡಿಗರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು
ಮಹಾರಾಷ್ಟ್ರದ ಸೋಲಾಪೂರ ಜಿಲ್ಲೆಯ ಜತ್, ಅಕ್ಕಲಕೋಟ ತಾಲ್ಲೂಕಿ ಸರ್ಕಾರಿ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಮರಾಠಿ ಶಿಕ್ಷಕರ ಬದಲಾಗಿ ಕನ್ನಡಿಗರನ್ನು ನೇಮಕ ಮಾಡುವಂತೆ ಆಗ್ರಹಿಸಿ ಗಡಿ ಕನ್ನಡಿಗರ ಸಂಘದಿಂದ ಜತ್ತ್ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು .

ಮಹಾರಾಷ್ಟ್ರದ ಜತ್ತ ತಾಲೂಕಿನ ಗಡಿನಾಡು ಕನ್ನಡ ಸಂಘದ ಕಾರ್ಯಕರ್ತರು ಮಾತನಾಡಿ ಬಿ.ಎಡ್ ಟಿಇಟಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ಇರಬೇಕು ,ಮರಾಠಿ ಭಾಷೆಯಲ್ಲಿ ಪರೀಕ್ಷಾ ಪತ್ರಿಕೆ ಇರುವುದರಿಂದ ನಮ್ಮ ಭವಿಷ್ಯದ ಬಗ್ಗೆ ಚಿಂತೆ ಆಗುತ್ತೀದೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಇರುವುದರಿಂದ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ ..
ಇನ್ನೂ ಈ ಬಗ್ಗೆ ಜತ್ ತಾಲೂಕಿನ ಶಾಸಕ ವಿಕ್ರಮ್ ಸಾವಂತ ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ .