NEET EXAMS

ನೀಟ್ ಪರೀಕ್ಷೆಯಲ್ಲಿ ಯುವಕರನ್ನು ವಂಚಿಸಿದವರನ್ನು ಸುಮ್ಮನೆ ಬಿಡಲ್ಲ ; ಪತ್ರಿಕೆ ಸೋರಿಕೆ ಬಗ್ಗೆ ಸದನದಲ್ಲಿ ಮೋದಿ ಗುಡುಗು

Share

ದೇಶದ ಯುವಕರ ಭವಿಷ್ಯದೊಂದಿಗೆ ಆಟವಾಡಿದವರನ್ನು ಸುಮ್ಮನೆ ಬಿಡುವುದಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಮೋದಿ, ನಾನು ಒಂದು ವಿಷಯದ ಬಗ್ಗೆ ಭರವಸೆ ನೀಡುತ್ತೇನೆ. ನಮ್ಮ ಯುವಕರನ್ನು ವಂಚಿಸಿದವರು ಶಿಕ್ಷೆಗೊಳಗಾಗದೇ ಎಲ್ಲೂ ಹೋಗಲ್ಲ. ನಮ್ಮ ಯುವಕರ ಭವಿಷ್ಯದ ಜೊತೆ ಆಟವಾಡಿದವರನ್ನು ಸರ್ಕಾರ ಬಿಡುವುದಿಲ್ಲ. ದೇಶದ ಯುವಕರ ಭವಿಷ್ಯದ ಹಾದಿಯನ್ನು ಹಾಳು ಮಾಡುವವರನ್ನು ಒಬ್ಬರ ನಂತರ ಒಬ್ಬರಂತೆ ಹೊಣೆಗಾರರನ್ನಾಗಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

ನಾವು ಸಮಸ್ಯೆಯನ್ನು ಎದುರಿಸಲು ಕಟ್ಟುನಿಟ್ಟಾದ ಕಾನೂನುಗಳನ್ನು ತಂದಿದ್ದೇವೆ ಮತ್ತು ಇಡೀ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ವಿದ್ಯಾರ್ಥಿಗಳು ಪರೀಕ್ಷೆಗಳ ಬಗ್ಗೆ ಚಿಂತಿಸದೆ ತಮ್ಮ ಅಧ್ಯಯನದತ್ತ ಗಮನ ಹರಿಸುವ ವಾತಾವರಣವನ್ನು ನಿರ್ಮಿಸಿಕೊಳ್ಳಿ. ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದರು.

Tags:

error: Content is protected !!