ವ್ಯಕ್ತಿಯೋರ್ವನ ಕಾಲಿನ ಮೇಲೆ ಬಸ್ ಹಾಯ್ದು ವ್ಯಕ್ತಿಗೆ ಗಂಭೀರವಾಗಿ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
40 ವರ್ಷದ ಸದಾಶಿವ ಯಡವಳ್ಳಿ ಎಂಬ ವ್ಯಕ್ತಿಯ ಕಾಲಿನ ಮೇಲೆ ಬಸ್ ಹರಿದ ಪರಿಣಾಮ ಗಂಭೀರವಾಗಿ ಗಾಯವಾಗಿದೆ.ಗಾಯಾಳು ಬೆಳಗಾವಿಯ ಕಣಬರ್ಗಿ ನಿವಾಸಿ ಎಂದು ತಿಳಿದು ಬಂದಿದೆ.ಬಸಗಾಗಿ ಕಾಯುತ್ತಿದ್ದ ಸಂಧರ್ಭದಲ್ಲಿ ಈ ಘಟನೆ ನಡೆದಿದೆ.
ಚಿಕ್ಕೋಡಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.