latest

ಎರಡನೇ ದಿನಕ್ಕೆ ಬಿಜೆಪಿ – ಜೆಡಿಎಸ್ ದೋಸ್ತಿ ಪಾದಯಾತ್ರೆ ; ರಾಜ್ಯದಿಂದ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ – ವಿಜಯೇಂದ್ರ ಕಿಡಿ

Share

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್ ಸರ್ಕಾರವು ಹಣವನ್ನು ಲೂಟಿ ಮಾಡಿ, ಸಿದ್ದರಾಮಯ್ಯನವರು ಮತ್ತು ಡಿ.ಕೆ. ಶಿವಕುಮಾರ್ ಅವರು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.

ಬಿಡದಿಯ ತಟ್ಟೆ ಇಡ್ಲಿ ಸವಿದು ಬಿಜೆಪಿ ನಾಯಕರ ಪಾದಯಾತ್ರೆ ಎರಡನೇ ದಿನವಾದ ಇಂದು ಬಿಡದಿಯಿಂದ ಹೊರಟಿದ್ದು, ತಮಟೆ ಬಾರಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಾತ್ರೆಗೆ ಚಾಲನೆ ನೀಡದ್ದರು .

ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ದೋಸ್ತಿಗಳ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬಿಡದಿ ಬಸ್ ನಿಲ್ದಾಣದಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ಕಾರ್ಯಕರ್ತರು ಉತ್ಸಾಹದಿಂದಲೇ ಭಾಗಿಯಾದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಮೈಸೂರು ಚಲೋ ಯಶಸ್ವಿಯಾಗಿ ಎರಡನೇ ದಿನಕ್ಕೆ ಕಾಲಿಟ್ಟದೆ. ಸಿಎಂ, ಡಿಸಿಎಂ ವಿರೋಧ ಪಕ್ಷವನ್ನು ಪ್ರಶ್ನೆ ಮಾಡುತ್ತಿದ್ದಾರೆ. ಆಡಳಿತ ಪಕ್ಷ ವಿರೋಧ ಪಕ್ಷಕ್ಕೆ ಪ್ರಶ್ನೆ ಹಾಕುವುದು ಇದೇ ಮೊದಲ ಬಾರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಕೊಡುತ್ತಿದ್ದಾರೆ. ಸದನದಲ್ಲಿ ಉತ್ತರ ಕೊಡದೆ ಸಿಎಂ ಓಡಿಹೋಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ದಲಿತರ ಅಭಿವೃದ್ಧಿಗೆ ಮೀಸಲು ಇಟ್ಟ ಹಣವನ್ನು ಲೂಟಿ ಮಾಡಿದ್ದಾರೆ. ಇದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ರಾಜ್ಯದ ಜನರಿಗೆ ಉತ್ತರ ಕೊಡಬೇಕು. ಡಿಸಿಎಂ ದರ್ಪದಿಂದ ಮಾತನಾಡ್ತಿದ್ದಾರೆ. ಇದು ಅಧಿಕಾರದ ದರ್ಪವಾಗಿದೆ’ ಎಂದು ಕಿಡಿಕಾರಿದರು.

Tags:

error: Content is protected !!