karnataka

ರಾಜ್ಯಪಾಲರ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ : ಡಿಕೆಶಿ

Share

ರಾಜ್ಯಪಾಲರು ವಿವಾದವೇ ಅಲ್ಲದ ವಿಚಾರವನ್ನು ವಿವಾದ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜ್ಯಪಾಲರ ನಡೆಯನ್ನು ಖಂಡಿಸಿ ಪಕ್ಷವು ರಾಷ್ಟ್ರಪತಿಗೆ ಮನವಿಯನ್ನು ಸಲ್ಲಿಸಲಿದೆ. ಯಾವುದೇ ದಾಂಧಲೆ ಇಲ್ಲದೆ ಶಾಂತಿಯುತವಾಗಿ ಎಚ್ಚರಿಕೆಯಿಂದ ಪ್ರತಿಭಟನೆ ನಡೆಸಲಾಗುವುದು. ಗಾಂಧಿ ಪ್ರತಿಪಾದಿಸಿದ ಶಾಂತಿ ಮಾರ್ಗದಲ್ಲಿ ಪ್ರತಿಭಟನೆ ನಡೆಸಿ ದೇಶಕ್ಕೆ ಸಂದೇಶ ನೀಡುವುದಾಗಿ ಡಿಕೆಶಿ ಹೇಳಿದ್ದಾರೆ.

ರಾಜ್ಯಪಾಲರು ತೀರ್ಮಾನ ಸರಿಯಾಗಿ ಮಾಡಿಲ್ಲ. ಸಚಿವ ಸಂಪುಟ, ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದೆ. ಹಿಂದಿನ ಸಂಪುಟ ಸಭೆಯಲ್ಲ ನಾವು ಕೈಗೊಂಡ ನಿರ್ಣಯವನ್ನು ರಾಜ್ಯಪಾಲರು ಸ್ವೀಕರಿಸಿಲ್ಲ. ರಾಜಭವನವನ್ನು ದುರಪಯೋಗ ಮಾಡಿ ನಿರ್ಧಾರ ಹೊರಡಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದರು.

Tags:

error: Content is protected !!