ಹೋಟೆಲ್ ರೂಂ ನಲ್ಲಿ ಕುಕ್ಕರ್ ಸ್ಫೋಟಗೊಂಡು 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮಗುಡ್ಡದಲ್ಲಿ ನಡೆದಿದೆ.
ಸವದತ್ತಿಯ ಯಲ್ಲಮ್ಮಗುಡ್ಡದ ಹೋಟೆಲ್ ಒಂದರಲ್ಲಿ ಕುಕ್ಕರ್ ಸ್ಫೋಟಗೊಂಡು 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಗೊಂಡಿರುವನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ, ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ದೇವರ ದರ್ಶನಕ್ಕೆಂದು ಸವದತ್ತಿಗೆ ಬಂದಿದ್ದ ಭಕ್ತರು ಸವದತ್ತಿ ಯಲ್ಲಮ್ಮನ ಗುಡ್ಡದ ಹೋಟೆಲ್ ನಲ್ಲಿ ಇದ್ದರು. ಈ ವೇಳೆ ಹೋಳಿಗೆ ಮಾಡಲೆಂದು ಹೋಟೆಲ್ ರೂಮಿನಲ್ಲಿ ಕುಕ್ಕರ್ ನಲ್ಲಿ ಬೇಳೆ ಬೇಯಿಸಲು ಇಟ್ಟಿದ್ದರು. ಆದರೆ ಬೇಳೆಗೆ ನೀರು ಹಾಕಲು ಮರೆತಿದ್ದಾರೆ ಎನ್ನಲಾಗಿದೆ. ಕೆಲ ಹೊತ್ತಲ್ಲೇ ಕುಕ್ಕರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಹೋಟೆಲ್ ತುಂಬ ಬೆಂಕಿ ಆವರಿಸಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.