Belagavi

ಹಿಂದುಳಿದ ವರ್ಗಕ್ಕೆ ಗೌರವದ ಬದುಕು ಕಟ್ಟಿಕೊಟ್ಟವರೇ ದೇವರಾಜ್ ಅರಸು ಅವರು- ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ

Share

ಬದಲಾವಣೆಗಾಗಿ ಹಲವು ಸವಾಲುಗಳನ್ನು ಎದುರಿಸಿ ಹಿಂದುಳಿದ ವರ್ಗಕ್ಕೆ ಗೌರವದ ಬದುಕು ಕಟ್ಟಿಕೊಡಲು ಮೊದಲಬಾರಿ ಪ್ರಯತ್ನಿಸಿದವರು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ ಅವರು ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸು ಅವರ 109ನೇ ಜಯಂತಿಯ ಕಾರ್ಯಕ್ರಮವನ್ನು ಬೆಳಗಾವಿಯ ಕುಮಾರಗಂಧರ್ವ ಕಲಾಮಂದಿರದಲ್ಲಿ ಹಮಿಕೊಳ್ಳಲಾಗಿತ್ತು.

ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಉತ್ತರ ಶಾಸಕ ಆಸೀಫ್ ಸೇಠ್, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಸೇರಿದಂತೆ ಇನ್ನುಳಿದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ದೀಪ ಬೆಳಗಿಸಿ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

ಈ ವೇಳೆ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಹಿಂದುಳಿದ ವರ್ಗಕ್ಕೆ ಗೌರವದ ಬದುಕು ಕಟ್ಟಿಕೊಡಲು ಮೊದಲಬಾರಿ ಪ್ರಯತ್ನಿಸಿದವರು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ ಅವರು. ಹಲವು ಸವಾಲುಗಳನ್ನು ಎದುರಿಸಿ ಶೋಷಿತ ವರ್ಗದವರನ್ನು ಮುಖ್ಯವಾಹಿನಿ ತರಲು ಅವರು ಶ್ರಮಿಸಿದರು. ಕರ್ನಾಟಕದಲ್ಲಿದ್ದ ಜೀತ ಪದ್ಧತಿ, ಮಲಹೋರುವ ಪದ್ಧತಿ, ಹೊಗಲಾಡಿಸಿದ ಶ್ರೇಯ ಕೇವಲ ಅವರಿಗೆ ಸಲ್ಲುತ್ತದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇನ್ನುಳಿದವರು ಭಾಗಿಯಾಗಿದ್ಧರು.

Tags:

error: Content is protected !!