DAM

ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

Share

ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳನ್ನು ಪರಿಶೀಲಿಸಲು ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರೀ ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು “ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ”ಎಂದು ತಿಳಿಸಿದರು.

“ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು” ಎಂದು ಹೇಳಿದರು. “ಈ ಅಣೆಕಟ್ಟಿನ ಉದ್ಯಾನವನ ಉತ್ತಮವಾಗಿದೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಏನು ಕೆಲಸ ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ” ಎಂದರು. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ಭೂಮಿ ಕಳೆದು ಕೊಂಡವರು ಹಾಗೂ ಭೂಸ್ವಾಧೀನ ವಿಚಾರವಾಗಿ ಈ ಭಾಗದ ಮೂರು ಜನ ಮಂತ್ರಿಗಳು ಹಾಗೂ ಶಾಸಕರು ಪ್ರಸ್ತಾವನೆ ಮಾಡಿದ್ದಾರೆ. ಎಲ್ಲರ ಬಳಿ ಯಾವ, ಕೆಲಸಗಳನ್ನು ಮಾಡಬಹುದು ಎಂದು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ವಿಚಾರವಾಗಿ ಪ್ರತ್ಯೇಕ ಸಭೆ ಕರೆದು, ಕಾನೂನು ಚೌಕಟ್ಟಿನಲ್ಲಿ ಯಾವ ರೀತಿಯ ಪರಿಹಾರ ನೀಡಬಹುದು ಎಂಬುದರ ಕುರಿತು ತೀರ್ಮಾನ ಮಾಡಲಾಗುವುದು. ಪುನರ್ವಸತಿ ವಿಚಾರವಾಗಿ ಅವಗಾಹನೆ ನಡೆಸಬೇಕಿದೆ. ಈಗಾಗಲೇ ಕಳೆದ ವರ್ಷದ ಏಪ್ರಿಲ್, ನವೆಂಬರ್ ಅಲ್ಲಿ ತಪಾಸಣೆ ನಡೆಲಾಗಿದೆ” ಎಂದು ಹೇಳಿದರು. “ಕೃಷ್ಣಾ ನದಿ ನೀರಿನ ಬಳಕೆ ಬಗ್ಗೆ ಪ್ರಶ್ನೆ ಕೇಳಿದಾಗ “ನಮ್ಮ ರಾಜ್ಯದ ಪಾಲಿನ ಒಂದು ಹನಿ ನೀರನ್ನು ಸಹ ರೈತರ ಹಿತ ಕಾಪಾಡಲು ಬಳಕೆ ಮಾಡಲಾಗುವುದು. ನಿಮ್ಮ ಸಲಹೆ ಇದ್ದರೆ ನೀಡಿ” ಎಂದರು.

Tags:

error: Content is protected !!