ತುಂಬಿ ಹರಿಯುತ್ತಿರುವ ಕೃಷ್ಣ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ವ್ಯಕ್ತಿ ಮೃತದೇಹ ಪತ್ತೆಯಾಗಿದೆ.
ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯ ಸೇತುವೆ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ.
ವ್ಯಕ್ತಿ ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿದಲ್ಲ. ಪೊಲೀಸರು ನದಿಯಿಂದ ಮೃತದೇಹ ಹೊರ ತಗೆದಿದ್ದಾರೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ