ರಾಯಭಾಗ ತಾಲೂಕಿನ ಕುಡಚಿ ಪುರಸಭೆಗೆ ಎರಡನೇ ಅವಧಿಗಾಗಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಆಗಿದೆ. ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ ಒಲಿದರೆ ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿದಿದೆ.
23 ಸದಸ್ಯರ ಪುರಸಭೆಯಲ್ಲಿ ಕಾಂಗ್ರೆಸ್ 14ಸ್ಥಾನ, ಬಿಜೆಪಿ 8 ಮತ್ತು 1 ಸ್ವಾತಂತ್ರ್ಯ ಅಭ್ಯರ್ಥಿಗಳಿದ್ದು, ಎರಡನೆ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮೀಸಲಾತಿ ಬಂದಿತ್ತು. ಅಧ್ಯಕ್ಷ ಉಪಾಧ್ಯಕ್ಷರ ಎರಡೂ ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ನಿಕಟಪೂರ್ವ ಉಪಾಧ್ಯಕ್ಷ ಕಾಂಗ್ರೆಸನ ಹಮಿದೋದೀನ ಸೈದೋದಿನ ರೋಹಿಲೆಯವರನ್ನು ಅಧ್ಯಕ್ಷರನ್ನಾಗಿ ಹಾಗೂ ಬಿಜೆಪಿಯ ಶಿವಪ್ಪ ಧರ್ಮಣ್ಣ ಗಸ್ತಿಯವರನ್ನು ಉಪಾಧ್ಯಕ್ಷರಾಗಿ ಚುನಾವಣೆ ಅಧಿಕಾರಿ ಸುರೇಶ್ ಮುಂಜೆ ಘೋಷಣೆ ಮಾಡುತ್ತಿದ್ದಂತೆ ಕಾರ್ಯಕರ್ತರು ಅಭಿಮಾನಿಗಳಲ್ಲಿ ಸಡಗರ ಸಂಭ್ರಮ ಮನೆ ಮಾಡಿತು.
ಕಾಂಗ್ರೆಸ್ ಪಕ್ಷದಲ್ಲಿ ಪೂರ್ಣ ಬಹುಮತ ಇದ್ದರೂ ಪರಿಶಿಷ್ಟ ಪಂಗಡದ ಅಭ್ಯರ್ಥಿ ಕೊರತೆಯಾಗಿದ್ದರಿಂದ ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಕೈಸೇರಿತು.