DEATH

ಯಾದಗಿರಿಯಲ್ಲಿ ಪಿಎಸ್ಐ ಸಾವು: ಚನ್ನಾರೆಡ್ಡಿ ರಾಜೀನಾಮೆಗೆ ಶಾಸಕ ಯತ್ನಾಳರ ಒತ್ತಾಯ

Share

ಯಾದಗಿರಿಯಲ್ಲಿ ಪಿಎಸ್ಐ ಅನುಮಾನಾಸ್ಪದ ಸಾವು ವಿಚಾರಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಟ್ವೀಟ್ ಮಾಡಿದ್ದಾರೆ. ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾ ರೆಡ್ಡಿ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಜನಪ್ರತಿನಿಧಿಯಾಗಿ ಮಾದರಿ ಯಾಗಿರಬೇಕಾಗಿದ್ದ ಶಾಸಕರು ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ‌ ಚನ್ನಾ ರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕು ಎಂದು ಶಾಸಕ ಯತ್ನಾಳ ಟ್ವೀಟ್ ಮಾಡಿದ್ದಾರೆ.

Tags:

error: Content is protected !!