Gadag

ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

Share

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶಿರೂಳ ಗ್ರಾಮದ ಬಳಿಯ ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಸೇತುವೆಗಾಗಿ ಗ್ರಾಮಸ್ಥರು ಜನಪ್ರತಿನಿಧಿಗಳನ್ನು, ಅಧಿಕಾರಿ ವರ್ಗದವರನ್ನು ಆಗ್ರಹಿಸುತ್ತಲೇ ಬಂದಿದ್ದರೂ ಕೂಡ ಇನ್ನುವರೆಗೂ ಅವರ ಬೇಡಿಕೆ ಈಡೇರಿಲ್ಲ. ಹೀಗಾಗಿ ಮಳೆಗಾಲದಲ್ಲಿ ಇವರು ಸುತ್ತು ಬಳಸಿಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶಿರೂಳ ಗ್ರಾಮದ ಬಳಿಯ ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ. ನೀರು ತುಂಬಿದ ರಸ್ತೆಯಲ್ಲಿ ಸಂಚಾರ ಮಾಡಲು ಆಗುತ್ತಿಲ್ಲಾ ಎಂದು ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು . ಕೂಡಲೇ ಸೇತುವೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!