ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಒಪಿಎಸ್ ಜಾರಿಗೆ ತರಬೇಕು ಎಂದು ಎನ್.ಪಿ ಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ಟಿ .ಲೋಕೇಶ್ ಆಗ್ರಹಿಸಿದ್ದರು .
ರಾಜ್ಯ ಸರ್ಕಾರದ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ರಾಜಸ್ಥಾನ ಮಾದರಿಯಲ್ಲಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು’ ಎಂದು ಎನ್ ಪಿ ಎಸ್ ರಾಜ್ಯ ಸರ್ಕಾರಿ ನೌಕರರ ಸಂಘದ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ.
ಎನ್ ಪಿಎಸ್ ಯೋಜನೆಯಿಂದ ನೌಕರರಿಗೆ ಆಗುವ ಸಮಸ್ಯೆಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು. ಈ ಕುರಿತು ಒತ್ತಡ ತರುವಂತೆ ಕೋರಿ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು . ಎನ್.ಪಿ ಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ಟಿ ಲೋಕೇಶ ಮಾತನಾಡಿ ಇಂದು ದೇಶದಲ್ಲಿ ಎನ್.ಪಿ ಎಸ್ ರದ್ದು ಮಾಡಿ ಓಪಿಎಸ್ ಜಾರಿಗೊಳಿಸುವಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು , ರಾಜ್ಯ ಸರ್ಕಾರ ಸಂಪುರ್ಟ್ ಸಭೆಯಲ್ಲಿ ಓಪಿಎಸ್ ಬಗ್ಗೆ ಚರ್ಚಿಸುವಂತೆ ಮನವಿ ಸಲ್ಲಿಸಲಾಗಿದೆ , ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ, ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷೊಷಿಸಿದಂತೆ ಒಪಿಎಸ್ ಜಾರಿಗೆ ತರಬೇಕು ಎಂದು ಆಗ್ರಹಿಸಿದರು .