ಬೆಳಗಾವಿಯ ಪ್ರವಾಸೋದ್ಯಮ ಹಾಗೂ ಸ್ಥಳೀಯ ಉದ್ಯಮಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಸರಕಾರ ಸಾಕಷ್ಟು ಅಭಿವೃದ್ಧಿ ಪಡಿಸಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ ಪಾಪಟ ಹೇಳಿದರು.
ಶುಕ್ರವಾರ ಬೆಳಗಾವಿ ನಗರದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಬೆಳಗಾವಿಯ ಪ್ರವಾಸಿಗರಲ್ಲಿ ಜಾಗೃತಿ ಜಾಥಾ ಮೂಡಿಸಲಾಯಿತು. ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ ಪಾಪಟ ಅವರು ಜಾಥಾಕ್ಕೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮಗಾರರದೊಂದಿಗೆ ಮಾತನಾಡಿದ ಅವರು ಬೆಳಗಾವಿ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಕೇವಲ ಪ್ರವಾಸಿ ತಾಣಗಳಲ್ಲಿ ಶಾಂತಿ ನೆಲೆಸಬೇಕು. ಇಲ್ಲಿನ ಪ್ರವಾಸಿಗರು ಗೋವಾ ಮತ್ತು ಬೇರೆ ರಾಜ್ಯಗಳಿಗೆ ಹೋಗುತ್ತಾರೆ. ಇಲ್ಲಿಯೂ ಸಾಕಷ್ಟು ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ನಮ್ಮ ಜಿಲ್ಲೆಯ ಪ್ರವಾಸಿ ತಾಣಗಳನ್ನು ಭೇಟಿ ನೀಡಬೇಕೆಂದು ಕರೆ ನೀಡಿದರು.
ನಗರದ ಕಿಲ್ಲಾ ಕೆರೆಯಿಂದ ಆರಂಭವಾದ ಪ್ರವಾಸೋದ್ಯಮ ಜಾಗೃತಿ ಜಾಥಾ ಆರ್.ಟಿ.ಓ. ಸಂಗೊಳ್ಳಿ ರಾಯಣ್ಣನ ವೃತ್ತ, ಚನ್ನಮ್ಮ ವೃತ್ತದ ಮಾರ್ಗವಾಗಿ ಬೆಳಗಾವ ಕ್ಲಬ್ ಗೆ ತಲುಪಿ ಕೊನೆಗೊಂಡಿತು. ಜಾಥಾದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.