Dharwad

ಮುಡಾ ಕೇಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ

Share

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ಇದರ ನಡುವೆಯೇ ಸಿಎಂ ರಾಜೀನಾಮೆಗೆ ಒತ್ತಾಯ ಕೇಳಿ ಬರುತ್ತಿದ್ದು, ಆದರೆ ಸಿದ್ದರಾಮಯ್ಯ ಅವರು ನಾನು ರಾಜೀನಾಮೆ ನೀಡುವುದಿಲ್ಲ, ಕಾನೂನು ಹೋರಾಟ ಮಾಡ್ತೀನಿ ಎಂದಿದ್ದಾರೆ. ಆದರೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ

ಧಾರವಾಡದಲ್ಲಿ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಭಿಮನ್ಯುವಿನ ಬಿಲ್ಲಿನ ದಾರವನ್ನು ಮೋಸದಿಂದ ಕಟ್ ಮಾಡಿಸುತ್ತಾರೆ. ಕರ್ಣನ ಕೈಯಿಂದ ದಾರ ಕಟ್ ಮಾಡಿಸುತ್ತಾರೆ ಎಂದು ಈ ಹಿಂದೆ ಧಾರವಾಡದಲ್ಲೇ ಭವಿಷ್ಯ ಹೇಳಿದ್ದೆ ಎಂದಿದ್ದಾರೆ.

ಮಹಾಭಾರತದಲ್ಲಿ ಕೃಷ್ಣನಿದ್ದ, ಭೀಮ ಗೆದ್ದ. ಇಲ್ಲಿ ಕೃಷ್ಣ ಇಲ್ಲ. ದರ್ಯೋಧನ ಗೆದ್ದ. ಅಭಿಮನ್ಯುವಿನ ಹೆಂಡತಿ ರಣರಂಗ ಪ್ರವೇಶಿಸುತ್ತಾಳೆ ಎಂದಿದ್ದೆ. ಈಗ ಏನಾಯ್ತು? ಬಿಲ್ಲಿನ ದಾರ ಕಟ್ ಮಾಡಿಸಿದರು. ಸಿದ್ದರಾಮಯ್ಯ ಜೀವನದಲ್ಲಿ ಎಂದಿಗೂ ಹೆಂಡತಿ ಹೊರಗಡೆ ಬರಲಿಲ್ಲ. ಅವಳು ಪಾವಿತ್ರ್ಯತೆ ಇರುವ ಹೆಣ್ಣು ಮಗಳು. ಈಗ ಎಲ್ಲ ಕಡೆ ಅವಳ ಹೆಸರು ಬಂತು ಎಂದಿದ್ದಾರೆ.

ತಿರುಪತಿ ಲಡ್ಡು ವಿಚಾರವಾಗಿ ಮಾತನಾಡಿದ ಅವರು, ತಿರುಪತಿಯಲ್ಲಿ ಕೃಷ್ಣ-ವೆಂಕಟೇಶ್ವರ ಇದ್ದ. ಆದರೆ ಈಗ ಆತ ಇಲ್ಲ. ದುರ್ಯೋಧನ ಗೆದ್ದ. ಈಗ ಸ್ಥಳ ಸ್ವಚ್ಛ ಮಾಡುತ್ತಿದ್ದಾರೆ. ಸ್ಥಳ ಸ್ವಚ್ಛ ಮಾಡುವುದು ಧರ್ಮಶಾಸ್ತ್ರ. ಆದರೆ, ಲಡ್ಡು ತಿಂದವರ ಹೊಟ್ಟೆಗೆ ಈಗ ಏನು ಮಾಡಬೇಕು? ಈಗಾಗಲೇ ನಾಲ್ಕು ವರ್ಷ ಆ ಲಡ್ಡು ತಿಂದುಬಿಟ್ಟಿದ್ದಾರೆ. ಅದಕ್ಕೆ ಸರ್ಕಾರವೇ ಪರಿಹಾರ ಹೇಳಬೇಕು. ಎಲ್ಲ ಕಡೆ ಅನೈತಿಕತೆ ಹೆಚ್ಚಾಗಿದೆ. ಶ್ರೀಗಳ ಉಪಟಳ ಹೆಚ್ಚಾಗುತ್ತದೆ ಎಂದು ಹೇಳಿದ್ದೆ. ಈಗ ಅದೇ ನಡೆಯುತ್ತಿದೆ. ಮುಂದೆಯೂ ನಡೆಯುತ್ತದೆ ಎಂದರು.

ಹಿಂಗಾರು ಮಳೆ ಚೆನ್ನಾಗಿದೆ. ಆದರೆ, ರೋಗ ರುಜಿನಗಳು ಹೆಚ್ಚಾಗುತ್ತವೆ. ಆಕಸ್ಮಿಕ ಸಾವುಗಳು ಸಂಭವಿಸುತ್ತವೆ ಎಂದು ಶ್ರೀಗಳು ಭವಿಷ್ಯ ನುಡಿದರು.

Tags:

error: Content is protected !!