ರಾಯಚೂರು ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮಕ್ಕಳ ಕಾಲು ಕಟ್ ಆದ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಖಾಸಗಿ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.

ಖಾಸಗಿ ಶಾಲೆ ಬಸ್ ಮಕ್ಕಳನ್ನು ಕರೆದುಕೊಂಡು ಮಾನ್ವಿ ಕಡೆಗೆ ಹೊರಟಿತ್ತು. ಅದೇ ರೀತಿ ಮಾನ್ವಿಯಿಂದ ರಾಯಚೂರು ಕಡೆಗೆ ಸಾರಿಗೆ ಬಸ್ ಹೊರಟಿತ್ತು ಎನ್ನಲಾಗಿದೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಮಾನ್ವಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

