Dharwad

ಧಾರವಾಡದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ಪೊಲೀಸ್ ಕಮಿಷನರ್ ಎನ್ .ಶಶಿಕುಮಾರ

Share

13 ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ಧಾರವಾಡದಲ್ಲಿ ಅದ್ಧೂರಿಯಾಗಿ ನಡೆಯಿತು. ಪೊಲೀಸ್ ಆಯುಕ್ತ ಎನ್ .ಶಶಿಕುಮಾರ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಗಮನ ಸೆಳೆದರು.

ಧಾರವಾಡ ಹೆಬ್ಬಳ್ಳಿ ಅಗಸಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಧಾರವಾಡ ಕಾ ರಾಜಾ ಗಣಪತಿ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಿತು. ಈ ವೇಳೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಸ್ವತಃ ಗಣಪತಿ ಮೂರ್ತಿ ಹೊತ್ತ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಗಮನಸೆಳೆದರು.

ಪೊಲೀಸ್ ಆಯುಕ್ತರು ಟ್ರ್ಯಾಕ್ಟರ್ ಚಲಾಯಿಸಿದ್ದನ್ನು ಕಂಡು ಯುವಪಡೆ ಕೇಕೆ, ಶಿಳ್ಳೆ, ಚಪ್ಪಾಳೆ ಹೊಡೆಯುವ ಮೂಲಕ ಕುಣಿದು ಕುಪ್ಪಳಿಸಿದರು.

Tags:

error: Content is protected !!