Belagavi

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಚಿಂತನೆ : ಸಚಿವ ವಿ.ಸೋಮಣ್ಣ

Share

ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ” ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಪುಣೆ, ಮಿರಜ್ , ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟ ವಂದೇ ಭಾರತ ಎಕ್ಸ್ಪ್ರೆಸ್ ರೈಲನ್ನು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಬರಮಾಡಿಕೊಂಡರು. ಸಂಸದ ಜಗದೀಶ ಶೆಟ್ಟರ್, ಹಾಲಿ, ಮಾಜಿ ಶಾಸಕರು ಸಾಥ್ ನೀಡಿದರು. ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.

ಸಚಿವ ವಿ ಸೋಮಣ್ಣ ಮಾತನಾಡಿ ಕೊಂಕಣ ರೈಲ್ವೆ ಜಾಲ ಕೇರಳದಿಂದ ಮಹಾರಾಷ್ಟ್ರದವರೆಗೆ ವಿಸ್ತರಿಸಿದೆ. ಹಾಗಾಗಿ, ಪ್ರಯಾಣಿಕರಿಗೆ ಇನ್ನೂ ಉತ್ತಮ ಸೇವೆ ಕಲ್ಪಿಸುವ ಉದ್ದೇಶದಿಂದ ಇದನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಆಲೋಚನೆ ಮಾಡುತ್ತಿದ್ದೇವೆ. ಆ ನಿಟ್ಟಿನಲ್ಲಿ ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದು, ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿಕೊಟ್ಟ ಬಳಿಕ ವಿಲೀನ ಪ್ರಕ್ರಿಯೆಯನ್ನು ಶುರು ಮಾಡಲಾಗುವುದು” ಎಂದು ಹೇಳಿದ್ದರು .

ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ ಬೆಳಗಾವಿ –ಬೆಂಗಳೂರು ನಡುವೆ ವಂದೇ ಭಾರತ್ ರೈಲು ತರುವ ಜವಾಬ್ದಾರಿ ನನ್ನದೂ , ಸವದತ್ತಿ ಯಲ್ಲಮ್ಮಗುಡ್ಡದಲ್ಲಿ ರೈಲು ಕಾಮಗಾರಿಗೆ ಕ್ರಮ ಕೈಗೊಳ್ಳುತ್ತೇನೆ , ಫಂಡರ್ ಪುರ –ಬೆಂಗಳೂರು ಪ್ರತಿ ನಿತ್ಯ ಓಡಾಡುವಂತೆ ಮಾಡುತ್ತೇನೆ ಎಂದು ತಿಳಿಸಿದ್ದರು .

ಈ ವೇಳೆ ಸಚಿವ ವಿ.ಸೋಮಣ್ಣ, ಸಂಸದ ಜಗದೀಶ್ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಸವಿತಾ ಕಾಂಬಳೆ, ಮಾಜಿ ಸಂಸದೆ ಮಂಗಲ ಅಂಗಡಿ ಇದ್ದರು.

Tags:

error: Content is protected !!