hubbali

ಬೈಪಾಸ್’ನಲ್ಲಿ ಭೀಕರ ಅಪಘಾತ ಓರ್ವ ಸ್ಥಳದಲ್ಲೇ ಸಾವು : ಇನ್ನೊಬ್ಬನ ಕಾಲು ಕಟ್

Share

ಬೊಲೆರೋ ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟು,ಬೊಲೆರೋ ವಾಹನದ ಚಾಲಕನ ಕಾಲುಗಳ ಕಟ್ ಆದ ಘಟನೆ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಬೆಳಗಾವಿ ಕಡೆಯಿಂದ ಹಾವೇರಿ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಬೊಲೆರೋ ವಾಹನ ತಾರಿಹಾಳ ಬ್ರೀಡ್ಜ್ ಬಳಿಯಲ್ಲಿ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ವಾಹನ ಚಾಲನೆ ಮಾಡುತ್ತಿದ್ದ ರಾಣೇಬೆನ್ನೂರು ಮೂಲದ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಸಂಚಾರಿ ವಿಭಾಗದ ಡಿಸಿಪಿ ರವೀಶ್ ಹಾಗೂ ದಕ್ಷಿಣ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಮರಳುಸಿದ್ಧಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ,ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!