animals

ನಂದಗಡ ಗ್ರಾಮದಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ : ಗ್ರಾಮಸ್ಥರಲ್ಲಿ ಆತಂಕ

Share

ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ. ಶಾಲಾ ಮಕ್ಕಳು, ಮಹಿಳೆಯರು, ವಯೋ ವೃದ್ಧರು ರಸ್ತೆಯಲ್ಲಿ ಭಯದಲ್ಲಿ ನಡೆದಾಡುವಂತಾಗಿದೆ.

ಖಾನಾಪೂರ ತಾಲೂಕಿನ ನಂದಗಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಾಲಗಲ್ಲಿಯಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ. ಶಾಲಾ ಮಕ್ಕಳು, ಮಹಿಳೆಯರು, ವಯೋ ವೃದ್ಧರು ರಸ್ತೆಯಲ್ಲಿ ಭಯದಲ್ಲಿ ನಡೆದಾಡುವಂತಾಗಿದೆ.
ನಂದಗಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಯಲ್ಲಪ್ಪ ಗುರವ ಉಪಾಧ್ಯಕ್ಷೆ ಸಂಗೀತಾ ಮಡ್ಡಿಮನಿ ನಾಯಿಗಳ ಬಗ್ಗೆ ಅಸಡ್ಡೆ ತೋರಿಸುತ್ತಿರುವುದರಿಂದ ಬೀದಿ ನಾಯಿಗಳ ನಿಯಂತ್ರಣ ಕಷ್ಟಕರವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

Tags:

error: Content is protected !!