Belagavi

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಜೆಡಿಎಸ್ ಪ್ರತಿಭಟನೆ

Share

ಊರಿಗೆಲ್ಲ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು, ರಾಜೀನಾಮೆ ಕೊಡದಿದ್ದರೆ ಜೆಡಿಎಸ್ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತದೆ ಎಂದು ಬೆಳಗಾವಿ ಜೆಡಿಎಸ್ ಅಧ್ಯಕ್ಷ ಶಂಕರ್ ಮಾಡಲಗಿ ಆಕ್ರೋಶ ವ್ಯಕ್ತಪಡಿಸಿದ್ದರು .

ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ಮಾತನಾಡಿ ಊರಿಗೆಲ್ಲ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದ ಅವರು, ರಾಜೀನಾಮೆ ಕೊಡದಿದ್ದರೆ ಜೆಡಿಎಸ್ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು. ಅಧಿಕಾರ ದುರ್ಬಳಕೆ: ಮುಡಾದಲ್ಲಿ ನಿವೇಶನಗಳನ್ನು ಕಬಳಿಸಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ನ್ಯಾಯಾಲಯಗಳ ಆದೇಶ ಕೂಡ ಸ್ಪಷ್ಟವಾಗಿದೆ. ತಮ್ಮ ಕುಟುಂಬಕ್ಕೆ ಅನುಕೂಲ ಮಾಡಿಕೊಳ್ಳಲು ಸಿಎಂ ಅವರು ಅಧಿಕಾರ ದುರ್ಬಳಕೆ ಜತೆಗೆ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ಹೀಗಾಗಿ ಒಂದು ಕ್ಷಣವೂ ಅವರು ಅಧಿಕಾರದಲ್ಲಿ ಮುಂದುವರಿದೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ಹಾಗೂ ನೂರಾರು ಜೆಡಿಎಸ್ ಕಾರ್ಯಕರ್ತರು ಮಾಜಿ ಶಾಸಕರು ಭಾಗಿ .

Tags:

error: Content is protected !!