ಘನ ಉಚ್ಚ ನ್ಯಾಯಾಲಯವು ಮೂಡ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ ಎಂದು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ಅವರು ನಿನ್ನೆ ರಾತ್ರಿ ಮಾದ್ಯಮಗಳ ಜೊತೆ ಮಾತನಾಡಿ ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಈ ನಿಯಮದಡಿ ಪ್ರಾಥಮಿಕ ಹಂತದ ತನಿಖೆಗೆ ಮಾತ್ರ ಅವಕಾಶ ದೊರೆಯಲಿದೆ. ಸ್ಯಾಂಕ್ಶನ್, ಪ್ರಾಸಿಕ್ಯೂಶನ್ ಗೆ ಅವಕಾಶವಿಲ್ಲ. 17ಎ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಪಾತ್ರ ಏನಿದೆ?! ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.