ಅಥಣಿ : ವಿವಿಧ ಬೇಡಿಕೆಗಳ ಈಡೇರಿಕೆಗೆಕಾಗಿ ಗ್ರಾಮ ಲೆಕ್ಕಾಧಿಕಾರಿಗಳು ಕೈಗೆ ಕಪ್ಪು ಬಟ್ಟೆಯನ್ನು ಕಟ್ಟಿಕೊಂಡು ರಾಜ್ಯ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಅಥಣಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅಥಣಿ ತಹಶೀಲ್ದಾರ್ ಶಿದರಾಯ್ ಭೋಸಗೆ ರವರ ಮುಖಾಂತರ ಕಂದಾಯದ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಪ್ರಮುಖ ಮೂರು ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ 9361 ಗ್ರಾಮ ಲೆಕ್ಕಾಧಿಕಾರಿ ಪ್ರತಿಭಟನೆ ನಡೆಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶಿಸಿ ನೀಡುವ ಬಗ್ಗೆ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬಗ್ಗೆ ಹಾಗೂ ಸೇವಾ ವಿಷಯದಲ್ಲಿ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಪ್ರಮುಖ ಬೇಡಿಕೆ ಈಡೇರಿಕೆಗಾಗಿ ಹಾಗೂ ಕೆಲಸದ ಒತ್ತಡವನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಿದರು.
ಇದೇ ವೇಳೆ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ ಪಾಟೀಲ್ ಹಾಗೂ ಕಲ್ಲಮೇಶ ಕಲಮಡಿ ಮಾತನಾಡಿ ಹಲವಾರು ವರ್ಷಗಳಿಂದ ನಮ್ಮ ಬೇಡಿಕೆ ಈಡೇರಿಕೆಗಾಗಿ ಹಲವು ಸರ್ಕಾರಗಳಿಗೆ ಮನವಿ ಪತ್ರ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಇದರಿಂದ ಇವತ್ತು ರಾಜ್ಯಾಧ್ಯಕ್ಷ ಸೂಚನೆ ಮೇರೆಗೆ ಇವತ್ತು ತಾಲೂಕು ಕ್ಷೇತ್ರದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ನಮ್ಮ ಬೇಡಿಕೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಮಾತೃ ಇಲಾಖೆಯ ಎಲ್ಲಾ ಕೆಲಸಗಳೊಂದಿಗೆ ಸರ್ಕಾರದ ಆದೇಶದಂತೆ ಇತರೆ ಇಲಾಖೆಗಳ ಹಲವಾರು ಕೆಲಸಗಳನ್ನು ನಿರ್ವಹಿಸುವ ಹಾಗೂ ಚುನಾವಣೆ, ಅತಿವೃಷ್ಟಿ, ಅನಾವೃಷ್ಟಿ, ಇನ್ನಿತರ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿದ್ದು ಸರ್ಕಾರ ಆದಷ್ಟು ಬೇಗನೆ ನಮ್ಮ ಬೇಡಿಕೆಯನ್ನು ಪೂರೈಸಲು ಆಗ್ರಹಿಸಿದರು.