ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಿಎಂ ಸಿದ್ಧರಾಮಯ್ಯನವರು ಉದ್ಘಾಟಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ರೂ. 22.45 ಕೋಟಿ ವೆಚ್ಚದಲ್ಲಿ ಪ್ರವಾಸಿಗರಿಗೆ ನಿರ್ಮಿಸಲಾಗಿರುವ ಕೊಠಡಿಗಳು, ಡಾರ್ಮಿಟರಿ, ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯಗಳು ಮತ್ತು ಮಹಿಳಾ ಅಭಿವೃದ್ಧಿ ನಿಗಮದಿಂದ ರೂ. 10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗಳು ಮತ್ತು ಅತಿಥಿಗೃಹವನ್ನು ಭಾನುವಾರ ಲೋಕಾರ್ಪಣೆಗೊಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಎಚ್.ಕೆ.ಪಾಟೀಲ, ರಾಮಲಿಂಗಾ ರೆಡ್ಡಿ, ಶಾಸಕರಾದ ವಿಶ್ವಾಸ್ ವೈದ್ಯ, ರಾಜು ಕಾಗೆ, ಬಾಬಾಸಾಹೇಬ್ ಪಾಟೀಲ, ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಮತ್ತಿತರರು ಉಪಸ್ಥಿತರಿದ್ದರು,