savdatti

ಸವದತ್ತಿ ಯಲ್ಲಮ್ಮಗುಡ್ಡ ಅಭಿವೃದ್ಧಿಗಾಗಿ ಸಿಎಂ ಸಭೆ ಯಶಸ್ವಿ…

Share

ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಶಕ್ತಿ ದೇವತೆ ಶ್ರೀ ರೇಣುಕಾ ಯಲ್ಲಮ್ಮನ ಗುಡ್ಡವನ್ನು ತಿರುಪತಿ-ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದ್ದು, ಈಗಾಗಲೇ ಒಂದೇ ಬಾರಿ 5 ಸಾವಿರ ಜನರು ಕುಳಿತು ಪ್ರಸಾದ ಸ್ವೀಕರಿಸುವಂತಹ ದಾಸೋಹ ಭವನ ನಿರ್ಮಾಣಕ್ಕೆ ಅನುಮತಿ ದೊರೆತಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ತಿಳಿಸಿದರು.

ಅವರು ಇಂದು ಮಾಧ್ಯಮಗಾರೊಂದಿಗೆ ಮಾತನಾಡುತ್ತ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆ ಯಶಸ್ವಿಯಾಗಿ ನಡೆದಿದೆ.

ಪ್ರತಿವರ್ಷ ಯಲ್ಲಮ್ಮನ ಗುಡ್ಡಕ್ಕೆ ಸುಮಾರು ಒಂದೂವರೆಯಿಂದ ಎರಡು ಕೋಟಿ ಭಕ್ತಾಧಿಗಳು ಆಗಮಿಸುತ್ತಾರೆ. ಅಲ್ಲದೇ ಹುಣ್ಣಿಮೆಯ ದಿನಗಳಲ್ಲಿ 10 ರಿಂದ 20 ಲಕ್ಷ ಜನ ಒಂದೇ ದಿನ ಆಗಮಿಸುತ್ತಾರೆ. ಅವರಿಗೆ ಉಳಿದುಕೊಳ್ಳಲು ವಸತಿ, ಪ್ರಸಾದಗೃಹ ಮತ್ತು ಪಾರ್ಕೀಂಗಗಾಗಿ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ. ಈಗಾಗಲೇ ಕ್ಯೂ ಕೌಂಟರ್ ಅಭಿವೃದ್ಧಿ ಮತ್ತು ಒಂದೇ ಬಾರಿ 5 ಸಾವಿರ ಜನರು ಕುಳಿತು ಪ್ರಸಾದ ಸ್ವೀಕರಿಸುವಂತಹ ದಾಸೋಹ ಭವನ ನಿರ್ಮಾಣಕ್ಕೆ ಅನುಮತಿ ದೊರೆತಿದೆ. ಈ ಅಭಿವೃದ್ಧಿಗಳಿಗಾಗಿ ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. 100 ದಿನದ ಕಾರ್ಯಾಚರಣೆಯೊಂದಿಗೆ ಹೊಸ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಹೇಳಿದರು.

Tags:

error: Content is protected !!