hubbali

ಸ್ವತಂತ್ರ ಸ್ಪರ್ಧೆಗೆ ಇಂಗಿತ: ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿಪಿ ಯೋಗೇಶ್ವರ…

Share

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು. ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. ರಾಜೀನಾಮೆ ಪತ್ರ ಸ್ವೀಕರಿಸಿ ಬಳಿಕ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸಿ.ಪಿ.ಯೋಗೇಶ್ವರ ಅವರು ರಾಜೀನಾಮೆ ಕೊಟ್ಟಿದ್ದಾರೆ. ಸ್ವ ಇಚ್ಚೆಯಿಂದ ಕೊಟ್ಟಿದ್ದಾರೆ. ಅದನ್ನು ಅಂಗೀಕಾರ ಮಾಡಿದ್ದೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

ಬಳಿಕ ಯೋಗೇಶ್ವರ ಅವರು ಮಾತನಾಡಿ, ಸ್ವ ಇಚ್ಛೆಯಿಂದ ಸಭಾಧ್ಯಕ್ಷರಿಗೆ ರಾಜೀನಾಮೆ ಕೊಟ್ಟಿದ್ದೇನೆ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಶಾಸಕರು ಆಗಿದ್ದರು. ಅವರು ರಾಜೀನಾಮೆ ನೀಡಿದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಜನಗಳ ಮಧ್ಯೆ ಇರುವ ಆಸೆ ಹೊಂದಿದ್ದೇನೆ. ಹೀಗಾಗಿ ವಿಧಾನ‌ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದೇನೆ ಎಂದರು.

ಯಾರ ಹತ್ತಿರ ಸಂಪರ್ಕ ಮಾಡಿಲ್ಲ. ಇವತ್ತು ಬಿಜೆಪಿ ವರಿಷ್ಠರಿಗೆ ಮನವಿ ಮಾಡತ್ತೇನೆ. ಒಂದು ಅವಕಾಶ ಮಾಡಿಕೊಡಿ. ಉಪಚುನಾವಣೆಯಲ್ಲಿ ಜನರು ಗೆದ್ದೆ ಗೆಲ್ಲಿಸತ್ತಾರೆಂಬ ನಂಬಿಕೆ ಇದೆ. ಹೀಗಾಗಿ ಕುಮಾರಸ್ವಾಮಿ ಅವರು ಸ್ಪರ್ಧೆಗೆ ಅವಕಾಶ ಮಾಡಿಕೊಡಲಿ. ವರಿಷ್ಠರು ಕೊನೆ ಗಳಿಗೆಯಲ್ಲಿ ಆದರೂ ಸಹಿತ ನನಗೆ ಅವಕಾಶ ಕೊಡಬೇಕು ಎಂದು ತಿಳಿಸಿದರು. ಪಕ್ಷದ ಎಲ್ಲ ನಾಯಕರು ನಮ್ಮ ಪರವಾಗಿ ಧ್ವನಿ ಎತ್ತಿದ್ದಾರೆ. ನನಗೆ ಟಿಕೆಟ್ ನೀಡಬೇಕೆಂದು ತಿಳಿಸಿದ್ದಾರೆ. ಆದರೆ ಈವರೆಗೆ ನನಗೆ ಸ್ಪಂದನೆ ಸಿಕ್ಕಿಲ್ಲ. ಇನ್ನೂ ಕಾಲಾವಕಾಶ ಇದೆ ಕಾದು ನೋಡೋಣಾ ಎಂದರು.

ನನಗೆ ಬಿಜೆಪಿಯಲ್ಲಿ ಇರಬೇಕು. ಎನ್ ಡಿಎ ಅಭ್ಯರ್ಥಿಯಾಗಬೇಕೆಂಬ ಆಸೆಯಿದೆ. ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ಅನುಭವ ನೋಡಿ ಪಕ್ಷ ಟಿಕೆಟ್ ನೀಡಬೇಕು. ಇಲ್ಲದೇ ಹೋದಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಇಚ್ಚೆ ಹೊಂದಿದ್ದೇನೆ. ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಯೋಚನೆ ಇಲ್ಲ‌. ಅವರು ಕೂಡ ಯಾರು ನನ್ನ ಸಂಪರ್ಕ ಮಾಡಿಲ್ಲ. ನಾಳೆ ಏನಾಗುತ್ತೋ ನೋಡೋಣ ಎಂದರು.

Tags:

error: Content is protected !!