ತಿರುಪತಿ ಮತ್ತು ಧರ್ಮಸ್ಥಳದ ಮಾದರಿಯಲ್ಲಿ ಸುಪ್ರಸಿದ್ಧ ಸುಕ್ಷೇತ್ರ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮಗುಡ್ಡದ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದೆಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ಇಂದು ಬೆಳಗಾವಿ ಜಿಲ್ಲೆಯ ಶಕ್ತಿದೇವತೆ ಶ್ರೀ ರೇಣುಕಾ ಯಲ್ಲಮ್ಮದೇವಿಯ ದರ್ಶನ ಪಡೆದುಕೊಂಡರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ ಇನ್ನುಳಿದವರು ಉಪಸ್ಥಿತರಿದ್ಧರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಿರುಪತಿ ಮತ್ತು ಧರ್ಮಸ್ಥಳದ ಮಾದರಿಯನ್ನು ಅಧ್ಯಯನ ಮಾಡಿಕೊಂಡು ಅದೇ ಮಾದರಿಯಲ್ಲಿ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಲಾಗಿದೆ. 45 ಕೋಟಿ ಬ್ಯಾಂಕಿನಲ್ಲಿದ್ದು, ವಾರ್ಷಿಕ ಅಂದಾಜು 25 ಕೋಟಿ ಆದಾಯ ಬರುತ್ತದೆ. ಉತ್ತಮ ಸೌಲಭ್ಯ ಒದಗಿಸುವ ಮೂಲಕ ಭಕ್ತರ ಭೇಟಿಯ ಪ್ರಮಾಣವನ್ನು ಹೆಚ್ಚಿಸಬೇಕು. ಸುಕ್ಷೇತ್ರಗಳಿಗೆ ಭೇಟಿ ನೀಡುವವರು ಬಡವರೇ ಆಗಿದ್ದರೂ ಸಂಪ್ರದಾಯ ಮತ್ತು ಖರ್ಚು ವೆಚ್ಚಕ್ಕೆ ಯೋಚನೆ ಮಾಡುವುದಿಲ್ಲ. ಆದ್ದರಿಂದ ಉತ್ತಮ ಸೌಲಭ್ಯ ಒದಗಿಸಬೇಕು. ಹುಣ್ಣಿಮೆ ಸಂದರ್ಭದಲ್ಲಿ ಚಕ್ಕಡಿಗಳಲ್ಲಿ ಜನರು ಬರುತ್ತಾರೆ. ಅಂತಹ ವೇಳೆ ಜಾನುವಾರುಗಳಿಗೆ ಮೇವು ಬ್ಯಾಂಕ್ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅಲ್ಲದೇ ಸೋಲಾರ್ ಪಾರ್ಕ್, ರೋಪ್ ವೇ ಮತ್ತಿತರ ಯೋಜನೆಗಳನ್ನು ಜಾರಿಗೊಳಿಸುವ ಚಿಂತನೆಯಿದೆ. ದೇವಸ್ಥಾನಕ್ಕೆ ಸಂಬಂಧಿಸಿದಂತೆ ನೂರಾರು ಎಕರೆ ಜಮೀನು ಇದ್ದು, .ಪಿಪಿಪಿ ಮಾದರಿ ಯೋಜನೆಗಳಡಿ ಬಂಡವಾಳ ಹೂಡಿಕೆಗೆ ಮುಂದಾಗುವರಿಗೆ ಕನಿಷ್ಠ 60 ವರ್ಷ ಗುತ್ತಿಗೆ ನೀಡಲಾಗುವುದು ಎಂದರು.
ಇನ್ನು ಕೇಂದ್ರ ಸರ್ಕಾರ ತೆರಿಗೆ ವಿಚಾರದಲ್ಲಿ ಹಲವಾರು ರಾಜ್ಯಗಳಿಗೆ ಅನ್ಯಾಯ ಮಾಡಿದೆ. ನಾವು ಫೆಡರಲ್ ವ್ಯವಸ್ಥೆಯ ಮೇಲೆ ನಂಬಿಕೆ ಇರಿಸಿದ್ದೇವೆ. ರಾಜ್ಯಕ್ಕೆ ಆದ ಅನ್ಯಾಯದ ವಿರುದ್ಧ ಬಿಜೆಪಿ ಸಂಸದರು ಧ್ವನಿ ಎತ್ತಬೇಕು. ಆದರೇ ಅವರಿಗೆ ಅಭಿವೃದ್ಧಿಯ ಚಿಂತೆಯಿಲ್ಲ ಸದಾ ಕ್ಲುಲ್ಲಕ – ಕೋಮುವಾದಿ ವಿಚಾರಗಳನ್ನು ಮುಂದೆ ಮಾಡಿ ಪ್ರತಿಭಟನೆ ಹೋರಾಟಗಳನ್ನ ನಡೆಸುವುದೊಂದೆ ಕೆಲಸವಾಗಿದೆ ಎಂದರು.
ಬೆಳಗಾವಿಯ ಚಳಿಗಾಲದಲ್ಲಿ ಅಧಿವೇಶನದಲ್ಲಿ ನೂತನ ಸಿಎಂ ಸ್ವಾಗತಕ್ಕೆ ಸಿದ್ಧರಾಗಿ ಎನ್ನಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ಹೇಳುತ್ತಾರಾ ? ಎಂದು ಪ್ರಶ್ನಿಸಿದರು. ದಸರ ಹಬ್ಬದೊಳಗೆ ಸಿಎಂ ಬದಲಾವಣೆ ಎಂದು ಕೆಲವರು ಹೇಳಿದ್ದರು. ತಮ್ಮ ರಾಜೀನಾಮೇ ಕೇಳುವ ಬದಲೂ ವಿಜಯೇಂದ್ರ ತಮ್ಮ ತಂದೆಯ ಮೇಲೆ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆ ಸ್ವತಃ ರಾಜೀನಾಮೆ ಕೊಡಬೇಕು. ವಿಜಯೇಂದ್ರಗೆ ರಾಜೀನಾಮೆ ಕೇಳುವ ನೈತಿಕ ಅಧಿಕಾರವಿಲ್ಲ ಎಂದರು.