ಸ್ವಾತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿ ಕಿತ್ತೂರು ರಾಣಿ ಚೆನ್ನಮ್ಮಳ 200ನೇ ವಿಜಯೋತ್ಸವಕ್ಕೆ ಕಿತ್ತೂರಿನಲ್ಲಿ ನಂದಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆಯನ್ನು ನೀಡಲಾಯಿತು.
ಬೆಳಗಾವಿ ತಾಲೂಕಿನ ಚೆನ್ನಮ್ಮನ ಕಿತ್ತೂರಿನಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಿ ಮರಳಿದ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು. ನಂತರ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷ್, ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಇನ್ನುಳಿದವರು ರಾಣಿ ಚೆನ್ನಮ್ಮ, ಆಮಟೂರು ಬಾಳಪ್ಪ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಿ ಭವ್ಯ ಜಾನಪದ ಕಲಾ ಮೆರವಣಿಗೆಗೆ ಚಾಲನೆಯನ್ನು ನೀಡಿದರು.
ಈ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ಶಾಸಕರಾದ ಬಾಬಾಸಾಹೇಬ್ ಪಾಟೀಲ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.