ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ
ಧಾರವಾಡ ಸಾಧನಕೇರಿ ಮೂಲದ ಸಚಿನ್ ದೇಶಪಾಂಡೆ (48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೇಲೂರು ಇಂಡಸ್ಟ್ರಿಯಲ್ಲಿ ಕಾರ್ಯ ನಿರ್ವಹಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಕಂಪನಿ ಕೆಲಸ ಮುಗಿಸಿಕೊಂಡು ಮನೆಯವರೊಂದಿಗೆ ಹಬ್ಬದ ಆಚರಿಸಬೇಕಾಗಿದ್ದ ವ್ಯಕ್ತಿ, ಹಿಟ್ ಆ್ಯಂಡ್ ರನ್ ನಿಂದಾಗಿ ಮಸಣ ಸೇರುವಂತಾಗಿದೆ.
ಗ್ರಾಮೀಣ ಠಾಣೆಯ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.