savdatti

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಸಭೆ

Share

ಶಕ್ತಿದೇವತೆ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ಪ್ರಪ್ರಥಮ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯನವರು ಸವದತ್ತಿ ಯಲ್ಲಮ್ಮ ಕ್ಷೇತ್ರ ವಸತಿ, ದರ್ಶನ ವ್ಯವಸ್ಥೆಗೆ ಆದ್ಯತೆ: ಮೂಲಸೌಕರ್ಯ ಕಲ್ಪಿಸಲು ಸೂಚನೆ ನೀಡಿದರು.

ಉತ್ತರ ಕರ್ನಾಟಕದ ಶಕ್ತಿದೇವತೆ ಸವದತ್ತಿ ಶ್ರೀ ರೇಣುಕಾಯಲ್ಲಮ್ಮನ ಗುಡ್ಡದ ಅಭಿವೃದ್ಧಿಯ ಕುರಿತು ಸಭೆಯನ್ನು ನಡೆಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸುಕ್ಷೇತ್ರ ಯಲ್ಲಮ್ಮನ ಗುಡ್ಡದ ಸಮಗ್ರ ಅಭಿವೃದ್ಧಿ ಯೋಜನೆಯ ರೂಪುರೇಷೆಗಳನ್ನು ಸಭೆಯಲ್ಲಿ ವಿವರಿಸಿದರು‌. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಹುಣ್ಣಿಮೆ ಸಂದರ್ಭದಲ್ಲಿ ಜನದಟ್ಟಣೆ ಹಾಗೂ ಸುಗಮ ಸಂಚಾರ ನಿರ್ವಹಣೆಗೆಇಂಟ್ರಾನೆಟ್ ವಾಕಿಟಾಕಿ ವ್ಯವಸ್ಥೆ ಅಗತ್ಯವಿರುತ್ತದೆ ಎಂದು ವಿವರಿಸಿದರು. ಪ್ರವಾಸೋದ್ಯಮ‌ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ, ಯಲ್ಲಮ್ಮ ಸುಕ್ಷೇತ್ರಕ್ಕೆ ಆಗಮಿಸುವ ಬಹಳಷ್ಟು ಜನರು ಬಡವರು ಹಾಗೂ ಅನಕ್ಷರಸ್ಥರಾಗಿರುತ್ತಾರೆ. ಆದ್ದರಿಂದ ಸ್ವಚ್ಛತೆ, ವಸತಿ ಹಾಗೂ ಸುಗಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಪ್ರತಿಪಾದಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರವಾಸೋದ್ಯಮ ಮತ್ತು ದೇವಸ್ಥಾನ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಭಕ್ತಾಧಿಗಳು ಪಡ್ಡಲಗಿ ತುಂಬಿಸಿ ಜೋಗತಿಯರಿಗೆ ನೈವೇದ್ಯ ಸಮರ್ಪಿಸುತ್ತಾರೆ. ಜನಸಂದಣಿ ಹೆಚ್ಚಾಗಿರುವಾಗ ದರ್ಶನ ಸಾಧ್ಯವಾಗುತ್ತಿಲ್ಲ; ಆದ್ದರಿಂದ ಎಲ್ಲರಿಗೂ ಸೂಕ್ತ‌ ವ್ಯವಸ್ಥೆ ಕಲ್ಪಿಸಬೇಕು ಎಂದರು.ಕ್ಷೇತ್ರದ ಒಟ್ಟಾರೆ ಅಭಿವೃದ್ಧಿಗೆ ಸರಕಾರದ‌ ವತಿಯಿಂದ 25 ಕೋಟಿ ರೂಪಾಯಿ ನೀಡುವಂತೆ‌ ಮನವಿ ಮಾಡಿಕೊಂಡರು.

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಪ್ರಥಮ ಸಭೆಯ ಅಧ್ಯಕತೆ ವಹಿಸಿ ಅವರು ಮಾತನಾಡಿದರು.ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಗೋವಾ ರಾಜ್ಯಗಳಿಂದ ಆಗಮಿಸುವ ಭಕ್ತಾಧಿಗಳಿಗೆ ಉತ್ತಮ ವಸತಿ‌ ಹಾಗೂ ದರ್ಶನಕ್ಕೆ ಅನುಕೂಲ ಕಲ್ಪಿಸಬೇಕು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿವರ್ಷ ಕೋಟ್ಯಂತರ ಭಕ್ತಾಧಿಗಳು ಭೇಟಿ ನೀಡುವುದರಿಂದ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸುವುದು ಸರಕಾರದ ಪ್ರಥಮ ಆದ್ಯತೆಯಾಗಿದೆ.ಉತ್ತಮ ಸೌಲಭ್ಯ ಒದಗಿಸಿದರೆ ಭಕ್ತಾಧಿಗಳ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಲಿದೆ. ಸುಲಭ ದರ್ಶನಕ್ಕೆ ಅವಕಾಶ ಕಲ್ಪಿಸುವುದು ಪ್ರಥಮ ಆದ್ಯತೆಯಾಗಿರಬೇಕು ಎಂದರು.

ಮುಜರಾಯಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ, ವಾಯವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ಶಾಸಕರಾದ ವಿಶ್ವಾಸ್ ವೈದ್ಯ, ಬಾಬಾಸಾಹೇಬ್ ಪಾಟೀಲ, ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿ.ರಾಜೇಂದ್ರ, ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.

Tags:

error: Content is protected !!