ಇನ್ನು 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಸಿ.ಪಿ.ಯೋಗೀಶ್ವರ್ ಮತ್ತು ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟದ್ದು. ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ. ಆದರೆ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು.
ಧಾರವಾಡ ಗಡಿ ಭಾಗದ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಂಚಮಸಾಲಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲಿ ಈ ಬಗ್ಗೆ ಸ್ಪೀಕರ್ ಅನುಮತಿ ಕೇಳಿದ್ದೆವು. ಆದರೆ, ಸರಿಯಾಗಿ ಸದನ ನಡೆಯಲಿಲ್ಲ. ಮುಡಾ ಹಗರಣದಿಂದ ಸದನ ನಡೆಯಲಿಲ್ಲ. ಈ ಸಮಯದಲ್ಲಿ ಯಾರಿಗೂ ಮಾತನಾಡಲು ಅವಕಾಶ ಸಿಗಲಿಲ್ಲ. ಹೋರಾಟದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ.ಬಿಜೆಪಿ ಇದ್ದಾಗಲೂ ಸ್ವಾಮೀಜಿ ಹೋರಾಟ ಮಾಡಿದ್ದಾರೆ. ನ್ಯಾಯ ಸಿಗುವವರೆಗೂ ಸ್ವಾಮೀಜಿ ಹೋರಾಟ ಮಾಡುತ್ತಾರೆ. ನಮ್ಮ ಸರ್ಕಾರ ಇದ್ದಾಗ ಹೋರಾಟ ಮಾಡುವುದು ಬೇಡ ಎಂದು ಹೇಳಲು ಆಗುವುದಿಲ್ಲ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಳುತ್ತಿದ್ದಾರೆ. ಆದರೆ, ರಿಸರ್ವೇಶನ್ ಫಿಕ್ಸ್ ಮಾಡೋದು ಕಷ್ಟ ಇದೆ. ಜತೆಗೆ ಕೆಲ ಶಾಸಕರಿಗೆ ಮಂತ್ರಿ ಮಾಡುವ ಆಸೆ ತೋರಿಸಿ ಹೋರಾಟದಿಂದ ದೂರ ಮಾಡುವ ವಿಚಾರವನ್ನು ಕಾಂಗ್ರೆಸ್ ಮಾಡುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿದರು. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಾನು ಹೋಗುತ್ತೇನೆ. ನಾನು ಹುಟ್ಟು ಹೋರಾಟಗಾರನಿದ್ದೇನೆ. ಕೆಲವರು ಮಂತ್ರಿ ಆಸೆಯಿಂದ ಮಾತನಾಡುತ್ತಿಲ್ಲ. ಆ ಬಗ್ಗೆ ನನಗೆ ಗೊತ್ತಿಲ್ಲ. ಹೋರಾಟಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ. ಸಿಎಂ ಅವರು ಯಾರಿಗೂ ಹೋರಾಟಕ್ಕೆ ಹೋಗಬೇಡಿ ಎಂದು ಹೇಳಿಲ್ಲ ಎಂದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ, ಅಧ್ಯಕ್ಷ ಸ್ಥಾನಕ್ಕೆ ಇಬ್ಬರು- ಮೂವರು ಅಧ್ಯಕ್ಷ ಸ್ಥಾನಕ್ಕೆ ಇಬ್ಬರು- ಮೂವರು ಆಕಾಂಕ್ಷಿಗಳಿದ್ದಾರೆ. ಆ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ. ಇದು ಮಾಧ್ಯಮದಲ್ಲಿ ಬರುತ್ತಿದೆ. ಡಿಕೆಶಿ ಅವರು ಉಪ ಮುಖ್ಯಮಂತ್ರಿಯಾಗಿರುವ ಕಾರಣ ಅವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಒತ್ತಡ ಹೆಚ್ಚಾಗಿರುವ ಕಾರಣ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುತ್ತಿದ್ದಾರೆ. ನಾವು ಹೇಳಿದವರನ್ನೇ ಹೈಕಮಾಂಡ್ ಅಧ್ಯಕ್ಷರನ್ನಾಗಿ ಮಾಡುವುದಿಲ್ಲ. ಯಾರು ಒಳ್ಳೆಯವರೋ ಅವರೇ ಅಧ್ಯಕ್ಷರಾಗುತ್ತಾರೆ ಎಂದು ತಿಳಿಸಿದರು.