ಡಿಸೆಂಬರ್ 12 ರಿಂದ ಆರಂಭಗೊಳ್ಳುವ ಸವದತ್ತಿ ಶ್ರೀ ರೇಣುಕಾ ಎಲ್ಲಮ್ಮ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕೆಂದು ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯೂ ಆಗ್ರಹಿಸಿದೆ. ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯೂ ಜಿಲ್ಲಾಧಿಕಾರಿಗಳಿಗೆ ಮನಮಿಯನ್ನ ಸಲ್ಲಿಸಿತು.
ಈ ವೇಳೆ ಇನ್ ನ್ಯೂಸ್ ನೊಂದಿಗೆ ಮಾತನಾಡಿದ ಸಂಘಟನೆಯ ಪ್ರಮುಖರಾದ ಸುಭಾಷ್ ರಾಮಚಂದ್ರ ಜಾಧವ್ ಅವರು ಮುಂದಿನ ತಿಂಗಳ ಡಿಸೆಂಬರ್ 12 ರಿಂದ ಸವದತ್ತಿ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಆರಂಭಗೊಳ್ಳಲಿದೆ. ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ ಗೋವಾ ಆಂಧ್ರಪ್ರದೇಶದಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಮ್ಮನ ಗುಡ್ಡದಲ್ಲಿರುವ ಕೊಳ್ಳಗಳ ಸ್ವಚ್ಛತೆ ಮತ್ತು ಜೋಗುಳ ಬಾವಿಯ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನ ಒದಗಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.