ಬೆಳಗಾವಿ ವಿಭಾಜನೆಯ ಕುರಿತು ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಇಂದು ಬೆಳಗಾವಿಯಲ್ಲಿ ಮಾತನಾಡಿದ ಅವರು ಬೆಳಗಾವಿ ವಿಭಾಜನೆ ಕುರಿತು ವಿಭಜನೆ ಕುರಿತು ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸುವ ಅವಶ್ಯಕತೆ ಇಲ್ಲ. ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ಆಗಬೇಕು ಎಂದರು.
ಇನ್ನು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಸೇವಕರಿಗೆ ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷದಿಂದ ಆಗುತ್ತಿರುವ ತಾರತಮ್ಯವನ್ನು ತಪ್ಪಿಸಲು ಸರ್ಕಾರದಿಂದಲೇ ಅನುದಾನವನ್ನ ನೀಡಲಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಂಬಂಧಿಸಿದ ಖಾತೆಗೆ ಬಿಟ್ಟಿದ್ದು ಎಂದರು.