ಅಥಣಿ:ರಾಜ್ಯದಲ್ಲಿ ಗ್ಯಾಂರಂಟಿ ಯೋಜನೆಗಳಿಂದ ಯಾವುದೆ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಅವರು ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಅಥಣಿ ಸುಗರ್ಸ್ ಕಾರ್ಖಾನೆ ಕಚೇರಿಯಲ್ಲಿ ಮಾಧ್ಯಮದವರೊಡನೆ ಮಾತನಾಡುತ್ತ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಅಭಿವೃದ್ಧಿ ಕಾರ್ಯಗಳು ಕುಂಟಿತವಾಗಿವೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ದೊರಕುತ್ತಿಲ್ಲ. ಕಳೆದ ಒಂದೂವರೆ ವರ್ಷಗಳಿಂದ ಯಾವುದೆ ಅಭಿವೃದ್ಧಿ ಕಾರ್ಯಗಳನ್ನ ಕಾನದೆ ಹಿನ್ನಡೆಯಗುಟ್ಟುದೆ.
ಕಾಗವಾಡ ಕ್ಷೇತ್ರದ ಜನರ ಬಹು ನಿರೀಕ್ಷಿತ ಯೋಜನೆ ಪ್ರಾರಂಭವಾಗದೆ ಗಡಿಯಲ್ಲಿ ರೈತರೂ ಸಂಕಷ್ಟದಲ್ಲಿದ್ದಾರೆ.
ಯಾವುದೆ ಕೆಲಸ ಕಾರ್ಯಗಳಿಲ್ಲದೆ ಜನರು ಗುಳೆ ಹೊರಟಿದ್ದಾರೆ.ಒಟ್ಟಾರೆ ಗ್ಯಾರಂಟಿ ಯೋಜನೆಗೆ ಜೋತು ಬಿದ್ದ ಕಾಂಗ್ರೆಸ್ ಸರ್ಕಾರ ಬಡವರ ಕಷ್ಟಕ್ಕೆ ಆಗುತ್ತಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.