ಸಹಕಾರಿ ಕ್ಷೇತ್ರದ ಅಭಿವೃದ್ಧಿಗಾಗಿ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಂಕಲ್ಪವನ್ನು ಕೈಗೊಂಡಿದ್ದು ರೈತರ ಹಿತದಲ್ಲಿ ಕಾರ್ಯ ಮಾಡುವುದಾಗಿ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದರು.
ಅವರು ಇಂದು ಬೆಳಗಾವಿ ನಗರದಲ್ಲಿ ಮಾಧ್ಯಮ ಗಾರರೊಂದಿಗೆ ಮಾತನಾಡಿದರು. ರಾಜ್ಯದ ಸಹಕಾರ ಸಚಿವರಾದ ಕೆ.ಎನ್ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಏಳು ದಿನಗಳ ಕಾಲ ಸಹಕಾರ ಸಪ್ತಾಹವನ್ನು ಆಯೋಜಿಸಲಾಗಿತ್ತು. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಈ ವೇಳೆ ನಿರ್ಧರಿಸಲಾಗಿದೆ. ಸಹಕಾರ ಕ್ಷೇತ್ರವನ್ನು ಇನ್ನಷ್ಟು ಗಟ್ಟಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಬಿಡಿಸಿಸಿ ಬ್ಯಾಂಕಿನಲ್ಲಿ ಠೇವಣಿಯನ್ನ ಹೆಚ್ಚಿಸಲು ಹಾಗೂ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಠೇವಣಿದಾರರನ್ನ ಆಕರ್ಷಿಸಲಾಗುವುದು ಎಂದರು.