ಟ್ರ್ಯಾಕ್ಟರ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ಹೊರವಲಯದ ಹೊಯ್ಸಳ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡ ರಾತ್ರಿ ನಡೆದಿದೆ.
ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಟ್ಯಾಕ್ಟರ್ ತೆರಳುತಿತ್ತು. ಬೆಳಗಾವಿ ಕಡೆಯಿಂದ ಲಾರಿ ಹುಬ್ಬಳ್ಳಿ ಕಡೆಗೆ ತೆರಳತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಘಟನೆ ನಡೆಯುತ್ತಿದಂತೆ ಸ್ಥಳೀಯ ವಾಹನ ಸವಾರರು ಟ್ಯಕ್ಟರ್‌ನಲ್ಲಿದ್ದ ಗಾಯಾಳುಗಳನ್ನು ರಕ್ಷಣೆ ಮಾಡಿ, ಸಂಚಾರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಗಾಯಾಳು ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂ ಅಪಘಾತ ನಡೆದ ಹಿನ್ನಲೆಯಲ್ಲಿ ಕೆಲಕಾಲ ತಡ ಸಂಜೆ ರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಬಳಿಕ ಸ್ಥಳಕ್ಕೆ ಕ್ರೆನ್ ಕರೆಯಿಸಿದ ಪೊಲೀಸರು ಅಪಘಾತಕ್ಕೆ ಒಳಗಾದ ವಾಹನಗಳನ್ನು ರಸ್ತೆ ಪಕಕ್ಕೆ ಸರಿಸಿ ಸೂಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಧಾರವಾಡ ಸಂಚಾರಿ ಪೊಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಚಾರಿ ಪೊಲೀಸರ ಪ್ರಾಥಮಿಕ ತನಿಖೆಯ ನಂತರವಷ್ಟೇ ಗಾಯಾಳು ಹೆಸರು ತಿಳಿದು ಬರಬೇಕಾಗಿದೆ.