Vijaypura

ನಿರಾಣಿ, ಕಾಶಪ್ಪನವರ ಬಳಿಕ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅಸಮಾಧಾನ: ಪಂಚಮಸಾಲಿ ಹೋರಾಟದಲ್ಲಿ ಭಿನ್ನಾಭಿಪ್ರಾಯ?

Share

ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರ ಬಳಿಕ ಪಂಚಮಸಾಲಿ ಪೀಠದ ಶ್ರೀ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಹೊರಹಾಕಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಬೆಳಗಾವಿ ಚಳಿಗಾಲದ ಅಧಿವೇಶನದ ಸಮಯದಲ್ಲಿ ಪಂಚಮಸಾಲಿ ಹೋರಾಟ ಮಾಡುವುದಾಗಿ ಹೇಳಿದ್ದರು.

ನಾವು ಸರ್ಕಾರದಲ್ಲಿದ್ದರೂ ಹೋರಾಟದಲ್ಲಿ ಭಾಗಿಯಾಗಿದ್ದೆವು. ಆದರೆ ಸ್ವಾಮೀಜಿಗಳು ಸರ್ಕಾರಕ್ಕೆ ಮುಜುಗರವಾಗುವಂತೆ ಹೋರಾಟ ಮಾಡಬಾರದು ಎಂದು ಪ್ರತಿಕ್ರಿಯಿಸಿದರು. ಯಾವುದೇ ಸರ್ಕಾರ ಇದ್ದರೂ ಅತಿಯಾಗಿದೆ ಎನ್ನುವ ರೀತಿಯಲ್ಲಿ ಹೋರಾಟ ಮಾಡಬಾರದು. ಪಂಚಮಸಾಲಿ ಸಮಾಜವನ್ನು ಬಿಟ್ಟು ನಾನಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು. ಇದೇ ವೇಳೆ ಗೃಹಲಕ್ಷ್ಮಿ ಹಣದ ವಿಚಾರವಾಗಿ, ಉಪಚುನಾವಣೆ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಮಾತನಾಡಿದರು. ನೀವು ಎಲ್ಲಾ ಜಿಲ್ಲೆಗಳಲ್ಲಿಯೂ ಚೆಕ್ ಮಾಡಿಕೊಳ್ಳಿ ಎಂದು ತಿಳಿಸಿದರು

Tags:

error: Content is protected !!