ಹುಟ್ಟು ಕಿವುಡುತನ ಹೊಂದಿರುವ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಮೂಲಕ ಕಿವುಡುತನ ಹೋಗಲಾಡಿಸುವ ಅತ್ಯಾಧುನಿಕ ತಂತ್ರಜ್ಞಾನ ಶಸ್ತ್ರ ಚಿಕಿತ್ಸೆ ನೀಡಲು ಉತ್ತರ ಕರ್ನಾಟಕ ಭಾಗದಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಹೆಗ್ಗಳಿಕೆಗೆ ವಿಜಯಪುರದ ಬಿಎಲ್ ಡಿ ಇ ಆಸ್ಪತ್ರೆ ಪಾತ್ರವಾಗಿದೆ.. ರಾಜ್ಯ ಸರ್ಕಾರದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯಡಿ ವಿಜಯಪುರದ ಬಿ ಎಲ್ ಡಿ ಇ ವಿಶ್ವವಿದ್ಯಾಲಯ ಶ್ರೀ ಬಿ ಎಂ ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನ ಕೇಂದ್ರದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಬಿಪಿಎಲ್ ಕಾರ್ಡ್ ಇರುವ ಕುಟುಂಬದ ಮಗು ಕಿವುಡುತನಕ್ಕೆ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ಪಡೆಯಬಹುದಾಗಿದೆ.
ಉತ್ತರ ಕರ್ನಾಟಕ ಭಾಗದ ಜಿಲ್ಲೆಯ ಬೆಳಗಾವಿಯ ಕೆ ಎಲ್ ಇ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಹೊರತುಪಡಿಸಿದರೆ ಉತ್ತರ ಕರ್ನಾಟಕ ಭಾಗದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಈ ಅತ್ಯಾಧುನಿಕ ತಂತ್ರಜ್ಞಾನರ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯಲಿದೆ. ಹುಟ್ಟಿನಿಂದ ಮಗು ಆಳವಾದ ಕಿವುಡುತನ ಅಥವಾ ಮೆನಿಂಜೈಟಿಸ್ ನಿಂದಾಗಿ ಕಿವುಡುತವನ್ನು ಹೊಂದಿರುವ ಮಕ್ಕಳಿಗೆ ಈ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತೆ. 8 ತಿಂಗಳಿಂದ ಆರು ವರ್ಷಗಳ ನಡುವಿನ ಮಕ್ಕಳಿಗೆ ಮಾತ್ರ ಕರ್ನಾಟಕ ಸರ್ಕಾರ ಉಚಿತವಾಗಿ ಶಸ್ತ್ರಚಿಕಿತ್ಸೆ ನೀಡುವ ಸೌಲಭ್ಯವನ್ನು ನೀಡಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಮಗುವಿಗೆ ಈ ಸೌಲಭ್ಯ ದೊರೆಯಲಿದೆ.ಖಾಸಗಿ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರದ ಮಗುವಿಗೆ 15ಲಕ್ಷಕ್ಕಿಂತಲೂ ಹೆಚ್ಚು ವೆಚ್ಚ ಭರಿಸಬೇಕಾಗುತ್ತದೆ.
ಮಗುವಿಗೆ ಎಂಟು ತಿಂಗಳಿಂದ ಒಂದು ವರ್ಷದವರೆಗೆ ಶ್ರವಣೇಂದ್ರಿಯ ಮೌಖಿಕ ಚಿಕಿತ್ಸೆ ಅಗತ್ಯವಿರುತ್ತದೆ ಇದರಲ್ಲಿ ಶ್ರವಣ ಮತ್ತು ಮಾತನಾಡುವ ವಿಧಾನವನ್ನು ಕಲಿಯಲು ಶ್ರವಣ ಶಾಸ್ತ್ರಜ್ಞರೊಂದಿಗೆ ನಿರಂತರ ಸೆಷನ್ ಗಳನ್ನು ನಡೆಸಲಾಗುತ್ತದೆ. ಎರಡು ವರ್ಷಗಳೊಳಗೆ ಈ ಶಸ್ತ್ರ ಚಿಕಿತ್ಸೆ ಮಾಡಿಸಿದ್ರೆ ಪರಿಣಾಮಕಾರಿಯಾಗಿರುತ್ತೆ ಅಂತಿದ್ದಾರೆ ವೈದ್ಯರು.ಎಲ್ಲ ವೈದ್ಯಕೀಯ ಪರೀಕ್ಷೆಗಳ ನಂತರ ಮಗುವಿನ ದಾಖಲಾತಿಗಳೊಂದಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯ ಅನುಮತಿ ಪಡೆದು ಮಗುವಿಗೆ ಶಸ್ತ್ರಚಿಕಿತ್ಸೆಯನ್ನು ನೀಡಲಾಗುತ್ತದೆ ಇಂತಹ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಉತ್ತರ ಕರ್ನಾಟಕ ಭಾಗದ ವಿಜಯಪುರ ಜಿಲ್ಲೆಯಲ್ಲಿ ದೊರೆತಿರುವುದು ಕಿವುಡುತನ ಹೋಗಲಾಡಿಸುವಲ್ಲಿ ಸಹಕಾರಿಯಾಗಲಿದೆ.ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಿಸಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಇದರ ಸದುಪಯೋಗವನ್ನು ವಿಜಯಪುರ ಹಾಗೂ ಬಾಗಲಕೋಟೆ ರಾಯಚೂರು ಕಲಬುರ್ಗಿ ಸೇರಿದಂತೆ ಈ ಭಾಗದ ಜಿಲ್ಲೆಯ ಜನರು ಪಡೆದುಕೊಳ್ಳಬೇಕು ಅಂತ ಬಿಎಲ್ ಡಿ ಇ ವಿಶ್ವವಿದ್ಯಾಲಯದ ಉಪಕುಲಪತಿ ಆರ್ ಎಸ್ ಮುಧೋಳ್ ರಿಜಿಸ್ಟರ್ ಆರ್ ವಿ ಕುಲಕರ್ಣಿ ಪ್ರಾಚಾರ್ಯ ಅರವಿಂದ್ ಪಾಟೀಲ್ ಸೇರಿದಂತೆ ವೈದ್ಯರು ಮನವಿ ಮಾಡಿದ್ದಾರೆ..