Uncategorized

ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ

Share

ಚಿಕ್ಕೋಡಿ:ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿವಾಗಿ ಅನಾರೋಗ್ಯದಿಂದ ಬಳಲುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.

ಕುಡಿಯುವ ನೀರಲ್ಲಿ ಕೊಳಚೆ ನೀರು ಮಿಶ್ರಣವಾಗಿ ವಾಂತಿ ಭೇದಿ ಶುರುವಾಗಿದೆ. ಗ್ರಾಮದ ಬೋರವೆಲ್ ಮೂಲಕ ನಲ್ಲಿಗೆ ನೀರು ಸರಬರಾಜು ಮಾಡಲಾಗುತಿತ್ತು.ನೀರು ಸರಬರಾಜು ಮಾಡುವ ಪೈಪ್ ಒಡೆದು ಕೊಳಚೆ ನೀರು ಮಿಶ್ರಣವಾಗಿದೆ.ಅಸ್ವಸ್ಥಗೊಂಡ 10 ಕ್ಕೂ ಹೆಚ್ಚು ಜನರಿಗೆ ನಿಪ್ಪಾಣಿಯ ಸರ್ಕಾರಿ ಆಸ್ಪತ್ರೆಯ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನುಳಿದವರಿಗೆ ಗ್ರಾಮದಲ್ಲೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಗ್ರಾಮದಲ್ಲಿ ತಾಲೂಕು ವೈದ್ಯಾಧಿಕಾರಿಗಳ ತಂಡ ಬಿಡು ಬಿಟ್ಟಿದೆ.

Tags:

error: Content is protected !!