ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗೋಲಗೇರಿ ಗ್ರಾಮದಲ್ಲಿ ಪ್ರತಿಭಟನೆ ನಡೆಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಪಾಟೀಲ್ ಡಂಬಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು. ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿ ಟೈಯರ್ಗೆ ಬೆಂಕಿ ಹಚ್ಚಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.