ಇಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತರು ಸುವರ್ಣ ಸೌಧದ ಎದುರು ಪ್ರತಿಭಟನೆಯನ್ನು ನಡೆಸಿದರು.
ಕನಿಷ್ಟ ವೇತನ ನೀಡುವಂತೆ ಆಗ್ರಹಿಸಿ all india trade union ಪ್ರತಿಭಟನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ರಾಜ್ಯ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.
ಈ ವೇಳೆ ಸೇವಾಭದ್ರತೆ,ಸಮಾನ ಕೆಲಸ ಸಮಾನ ವೇತನ,ನಿವೃತ್ತಿ ವೇಳೆ ಒಂದು ಲಕ್ಷ ಇಡುಗಂಟು ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೇಂದ್ರ, ಮತ್ತು ರಾಜ್ಯ ಸರ್ಕಾರಗಳು ಈಡೇರಿಸಬೇಕು. ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೂಲಿಯನ್ನು ನೀಡಬೇಕು. ನಿಜವಾದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸೌಲಭ್ಯ ಸಿಗುವತಾಂಗಬೇಕು. 6 ಗ್ಯಾರಂಟಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ವೇತನವನ್ನು ಹೆಚ್ಚಿಸಬೇಕೆಂದು ಸಂಘದ ಅಧ್ಯಕ್ಷ ಅಮಜದ್ ಅಗ್ರಹಿಸಿದರು.
ಈ ವೇಳೆ ಎ ಐ ಟಿ ಯು ಸಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.