ಪಂಚಮಸಾಲಿ ಹೋರಾಟಗಾರರ ಮೇಲೆ ಸರ್ಕಾರ ನಡೆಸಿದ ಹಲ್ಲೆಯನ್ನು ಖಂಡಿಸಿ ಇಂದು ಸುವರ್ಣ ಸೌಧದ ಎದುರು ಬಿಜೆಪಿಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದವರ ಮೇಲೆ ಸರ್ಕಾರ ಹಲ್ಲೆ ನಡೆಸಿದೆ ಎಂದು ಆರೋಪಿಸಿ ಇಂದು ಸುವರ್ಣಸೌಧದ ಎದುರಿನ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಯ ಎದುರು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನ ಸಭೆಯ ವಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಮಾತು ತಪ್ಪಿದ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿ ಪ್ರತಿಭಟನೆಯನ್ನು ನಡೆಸಿದರು.
ಸಿಎಂ ಸಿದ್ದರಾಮಯ್ಯ ಅವರು ಸುವರ್ಣಸೌಧದಲ್ಲಿ ಅನುಭವ ಮಂಟಪ ಹಾಗೂ ಬಸವಣ್ಣನವರ ತೈಲ ಚಿತ್ರ ಅನಾವರಣಗೊಳಿಸುತ್ತಿದ್ದಾಗ ದಯವೇ ಧರ್ಮದ ಮೂಲವಯ್ಯ ಎಂದಿದ್ದರು. ಆದರೆ ದಯೇಯನ್ನ ಮರೆತು ಪಂಚಮಸಾಲಿ ಹೋರಾಟಗಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಮೀಸಲಾತಿ ಕೇಳಿದ್ರೆ ಲಾಠಿ ಏಟು ಕೊಟ್ಟಿದ್ದಾರೆ. ಬಸವಣ್ಣನವರ ಸಮಾಜವನ್ನು ಅವಮಾನಿಸಿದ್ದಾರೆ. ತಾವೇ ಕಲ್ಲುಗಳನ್ನ ತೂರಿ ಹೋರಾಟಗಾರರ ಮೇಲೆ ಪೊಲೀಸರಿಂದ ಹಲ್ಲೆ ನಡೆಸಲಾಗಿದೆ. ಮೊದಲೇ ಟ್ರ್ಯಾಕ್ಟರ್ ತೆಗೆದುಕೊಂಡು, ಬರದಂತೆ, ಕಾರು ತೆಗೆದುಕೊಂಡು ಬರದಂತೆ ನಿರ್ಬಂಧ ಹೇರಲಾಗುತ್ತಿತ್ತು. ಇದೆಲ್ಲವನ್ನು ನೋಡಿದರೆ ಇದೊಂದು ಪೂರ್ವ ನಿಯೋಜಿತ ಹಲ್ಲೆ. ಮೀಸಲಾತಿ ಹೋರಾಟ ಮಾಡುವವರನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಹೋರಾಟಗಾರರ ಮೇಲೆ ಹಲ್ಲಿ ಮಾಡಿದವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕೆಂದು ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯಿಸಿದರು.
ಇನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ನೀತಿಯನ್ನ ಖಂಡಿಸಿದರು. ಸಿಎಂ ಸಿದ್ದರಾಮಯ್ಯ ಪಂಚಮಸಾಲಿ ಸಮಾಜವನ್ನು ಅವಮಾನಿಸಿದ್ದು ಕೂಡಲೇ ಕ್ಷಮೆ ಕೇಳಬೇಕು ಎಂದರು.
ಪ್ರತಿಭಟನೆಯಲ್ಲಿ ಶಾಸಕಾರದ ಸುನಿಲ್ ಕುಮಾರ್, ಅಶ್ವಥ್ ನಾರಾಯಣ, ಎಸ್ ಆರ್ ವಿಶ್ವನಾಥ ಭಾರತ್ ಶೆಟ್ಟಿ, ಪ್ರಭು ಚೌಹಾಣ್ ಸೇರಿ ಹಲವರು ಭಾಗಿ